ತುಮಕೂರು: ಲಾಕ್ಡೌನ್ ನಡುವೆ ಪಿಎಚ್ ಕಾಲೋನಿಯಲ್ಲಿ ಮುಸ್ಲಿಂ ಮಹಿಳೆಯರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ರಂಜಾನ್ ಮಾಸದ ಸಂದರ್ಭದಲ್ಲಿ ನಮಗೆ ಅಗತ್ಯ ಸಾಮಗ್ರಿಗಳು ದೊರೆಯುತ್ತಿಲ್ಲ. ಹಸಿವಿನಿಂದ ಬಳಲುವಂತಾಗಿದೆ ಎಂದು ಮುಸ್ಲಿಂ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್, ಪರಿಸ್ಥಿತಿಯನ್ನು ತಿಳಿಗೊಳಿಸಿದರು.