ತುಮಕೂರು: 2022ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ತುಮಕೂರಿನ ಕೇಂದ್ರೀಯ ವಿದ್ಯಾಲಯದ ಬಯಾಲಜಿ ಜೀವಶಾಸ್ತ್ರ ವಿಭಾಗದ ಜಿ ಪೋನಸಂಕರಿ ಆಯ್ಕೆಯಾಗಿದ್ದಾರೆ. ಶಿಕ್ಷಕರ ದಿನಾಚರಣೆಯಂದು ಕೇಂದ್ರೀಯ ಶಿಕ್ಷಣ ಸಚಿವಾಲಯವು ನೀಡುವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದೇಶದ ಒಟ್ಟು 46 ಮಂದಿ ಶಿಕ್ಷಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಸೆಪ್ಟೆಂಬರ್ 5 ರಂದು ದೆಹಲಿಯ ವಿಗ್ಯಾನ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ. ಕೇಂದ್ರೀಯ ವಿದ್ಯಾಲಯದ ಬಯಾಲಜಿ ಜೀವಶಾಸ್ತ್ರ ವಿಭಾಗದ ಜಿ ಪೋನಸಂಕರಿ ಅವರು, 1995ರಲ್ಲಿ ಗಾಂಧಿ ಧಾಮದ ಕೇಂದ್ರೀಯ ವಿದ್ಯಾಲಯಕ್ಕೆ ಬಯಾಲಜಿ ಶಿಕ್ಷಕರಾಗಿ ನೇಮಕಗೊಂಡಿದ್ದರು. ನಂತರ 2002ರಲ್ಲಿ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಮಾಡಿದ್ದರು. ಅಲ್ಲದೇ ಕನ್ಯಾಕುಮಾರಿಯಲ್ಲಿಯೂ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಮಾಡಿದ್ದ ಇವರು ಪ್ರಸ್ತುತ ತುಮಕೂರು ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ : ಕರ್ನಾಟಕ ಕಲಾಶ್ರೀ ವಾರ್ಷಿಕ ಪ್ರಶಸ್ತಿ ಪ್ರಕಟ: 18 ಕಲಾವಿದರಿಗೆ ಗೌರವ