ತುಮಕೂರು : ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ನಾಯಕ ಸಮುದಾಯದ ಮುಖಂಡರು, ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಜನೋತ್ಸವ ಪೂರ್ವಭಾವಿ ಸಮಾವೇಶದಲ್ಲಿ ಭಾರಿ ಗದ್ದಲವೇ ನಡೆಯಿತು.
ಸಚಿವ ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಯಕ ಸಮುದಾಯದ ಮುಖಂಡರು ಭಾರಿ ಗಲಾಟೆ ಮಾಡಿದರು. ಬಿಜೆಪಿ ಶಾಸಕ ಡಾ. ರಾಜೇಶ್ ಗೌಡ ಅವರು ನಾಯಕ ಸಮುದಾಯ ಹಾಗೂ ಹಿಂದೂ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಮಂಜು ಆರೋಪಿಸಿ ಗಲಾಟೆ ಮಾಡಿದರು. ನಂತರ ಸ್ಥಳೀಯ ಮುಖಂಡರು ಹಾಗೂ ಪೊಲೀಸರು ಅವರನ್ನು ಸಮಾಧಾನಪಡಿಸಿ ಕಾರ್ಯಕ್ರಮದಿಂದ ಹೊರಗೆ ಕರೆದುಕೊಂಡು ಹೋದರು.
ಓದಿ: ಕಾಂಗ್ರೆಸ್ನವರು ಬಿಜೆಪಿ ನೋಡಿ ಕಲಿಯಬೇಕಿದೆ: ಸಚಿವ ಸುಧಾಕರ್ ಟಾಂಗ್