ತುಮಕೂರು: ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನೀಡಿರುವ ಸ್ಪಷ್ಟೀಕರಣದನ್ವಯ ಜಿಲ್ಲೆಯಲ್ಲಿ ಜೂನ್ 14 ರಿಂದ ಮುಂದಿನ ಆದೇಶದವರೆಗೆ ಯಾವುದೇ ಬಟ್ಟೆ ಅಂಗಡಿ ಹಾಗೂ ಜುವೆಲ್ಲರಿ ಅಂಗಡಿಗಳನ್ನು ತೆರೆದು ಮಾರಾಟ ಮಾಡಲು ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಅವರೊಂದಿಗೆ ಚರ್ಚಿಸಿ ಈ ಕುರಿತು ಸೂಚನೆ ನೀಡಿದ್ದಾರೆ. ಉಳಿದಂತೆ ಎಲ್ಲಾ ಉತ್ಪಾದನಾ ಘಟಕ/ಕೈಗಾರಿಕೆಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಸಾಮರ್ಥ್ಯದೊಂದಿಗೆ ಕೆಲಸ ನಿರ್ವಹಿಸಲು ಅನುಮತಿಸಲಾಗಿದೆ.
ಅದೇ ರೀತಿ ಉಡುಪು ತಯಾರಿಕೆ(ಗಾರ್ಮೆಂಟ್ಸ್)ಯಲ್ಲಿ ತೊಡಗಿರುವ ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ ಶೇ.30ರಷ್ಟು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 2 ಗಂಟೆವರೆಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: Karnataka Unlock: ಅಗತ್ಯ ವಸ್ತುಗಳ ಮಳಿಗೆ, ಕೈಗಾರಿಕಾ ಘಟಕಗಳಿಗೆ ಮಾತ್ರ ನಿರ್ಬಂಧಿತ ಅನ್‌ಲಾಕ್