ETV Bharat / state

ಚುನಾವಣೆ ಎದುರಿಸಲಾಗದವರು ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ: ಸಿಎಂ - kannada news

ಮಂಡ್ಯದಲ್ಲಿ ಚುನಾವಣೆ ಎದುರಿಸಲು ಶಕ್ತಿ ಇಲ್ಲದವರು ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ
author img

By

Published : Apr 1, 2019, 5:26 PM IST

ತುಮಕೂರು:ಮಂಡ್ಯ ಜಿಲ್ಲೆಯಲ್ಲಿ ಚುನಾವಣೆಯನ್ನು ಎದುರಿಸಲು ಶಕ್ತಿ ಇಲ್ಲದವರು ಕುತಂತ್ರದ ಮೂಲಕ ಅಧಿಕಾರ ಇಲ್ಲದೇ ದಬ್ಬಾಳಿಕೆ ನಡೆಸಿ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಸುಮತಲಾಗೆ ಟಾಂಗ್ ನೀಡಿದರು.

ಶಿರಾ ತಾಲೂಕು ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ದೇವಸ್ಥಾನದಲ್ಲಿ ನಡೆದ ವಿಶೇಷ ಹೋಮ ಹವನದಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಅಧಿಕಾರ ಇಲ್ಲದೆಯೇ ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಆದರೆ ಕಾನೂನು ವ್ಯಾಪ್ತಿಯಲ್ಲಿ ಯಾವ ಕೆಲಸವನ್ನ ಅಧಿಕಾರಿಗಳು ಮಾಡಬೇಕು ಅದನ್ನು ಅವರು ಮಾಡುತ್ತಾರೆ ಎಂದರು.

ನನ್ನ ಆರೋಗ್ಯ ಮತ್ತು ದೇವೇಗೌಡರ ಆರೋಗ್ಯದ ದೃಷ್ಟಿಯಿಂದ ಮತ್ತು ಲೋಕಕಲ್ಯಾಣಕ್ಕಾಗಿ ಸಂಕಲ್ಪ ಮಾಡಿಕೊಂಡು ಇಂದು ಹೋಮ ಹವನದಲ್ಲಿ ಭಾಗವಹಿಸಿದ್ದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲವೆಂದು ಸಿಎಂ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ

ಜೆಡಿಎಸ್ ಕಾರ್ಯಕರ್ತರ ಮನೆಗಳ ಮೇಲೆ ದಂಡೆತ್ತಿ ಹೋದ ಐಟಿ ಅಧಿಕಾರಿಗಳಿಗೆ ನೋಟು ಎಣಿಸುವ ಯಂತ್ರ ಸಿಕ್ಕಿತೇ?. ಈಶ್ವರಪ್ಪ ಅವರು ನೀರಾವರಿ ಸಚಿವರಾಗಿದ್ದಾಗ ಅವರ ಮನೆಯಲ್ಲಿ ನೋಟು ಎಣಿಸುವ ಯಂತ್ರಗಳನ್ನು ಇಟ್ಟುಕೊಂಡಿದ್ದರಾ ಎಂಬುದನ್ನು ನೆನಪಿಟ್ಟುಕೊಳ್ಳಿ ಎಂದರು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಗೆಲುವು ಸಾಧಿಸಲಿದೆ. ಮತದಾರರು ಕೂಡ ಮೈತ್ರಿಕೂಟದ ಅಭ್ಯರ್ಥಿಗೆ ಬೆಂಬಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಹೇಮಾವತಿ ನದಿ ನೀರು ಹಂಚಿಕೆ ಕುರಿತ ಟೀಕೆಗಳಿಗೆ ಉತ್ತರಿಸಿದ ಸಿ.ಎಂ, 1962ರಲ್ಲಿ ದೇವೇಗೌಡರ ನೀರಾವರಿ ಯೋಜನೆಯ ಹೋರಾಟದ ಫಲವೇ ಹೇಮಾವತಿ ಜಲಾಶಯ. ಬಿಜೆಪಿ ನಾಯಕರು, ಮಾಜಿ ಶಾಸಕ ಸುರೇಶ್ ಗೌಡ ಅಂದು ಹುಟ್ಟಿದ್ದರೇ ?. ನೀರಾವರಿ ಯೋಜನೆಗಳಿಗೆ ಶಾಸಕ ಜಿ ಮಾಧುಸ್ವಾಮಿ ಅವರ ಕೊಡುಗೆ ಎನು ?. ನಾಲಿಗೆ ಇದೆ ಎಂದು ಕೀಳು ಅಭಿರುಚಿಯ ಮಾತುಗಳನ್ನಾಡುವುದು ಸರಿಯಲ್ಲವೆಂದು ಸಿಎಂ ಹೇಳಿದರು.

Intro:ಮಂಡ್ಯದಲ್ಲಿ ಚುನಾವಣೆ ಎದುರಿಸಲು ಶಕ್ತಿ ಇಲ್ಲದವರು ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ.....
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕೆ.....

ತುಮಕೂರು
ಮಂಡ್ಯ ಜಿಲ್ಲೆಯಲ್ಲಿ ಚುನಾವಣೆಯನ್ನು ಎದುರಿಸಲು ಶಕ್ತಿ ಇಲ್ಲದವರು ಕುತಂತ್ರದ ಮೂಲಕ ಮತ್ತು ಅದಿಕಾರ ಇಲ್ಲದೇ ದಬ್ಬಾಳಿಕೆ ನಡೆಸಿ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ತುಮಕೂರು ಜಿಲ್ಲೆ ಶಿರಾ ತಾಲೂಕು ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ದೇವಸ್ಥಾನದಲ್ಲಿ ವಿಶೇಷ ಹೋಮ ಹವನದಲ್ಲಿ ಪಾಲ್ಗೊಂಡು ಪತ್ರಕರ್ತರೊಂದಿಗೆ ಮಾತನಾಡಿ, ಕಾನೂನು ವ್ಯಾಪ್ತಿಯಲ್ಲಿ ಯಾವುದೇ ಕೆಲಸವನ್ನು ಮಾಡಬೇಕು ಅಧಿಕಾರಿಗಳು ಮಾಡುತ್ತಾರೆ ಎಂದು ತಿಳಿಸಿದರು.

ನನ್ನ ಆರೋಗ್ಯ ಮತ್ತು ದೇವೇಗೌಡರ ಆರೋಗ್ಯದ ದೃಷ್ಟಿಯಿಂದ ಮತ್ತು ಲೋಕಕಲ್ಯಾಣಕ್ಕಾಗಿ ಸಂಕಲ್ಪ ಮಾಡಿಕೊಂಡು ಇಂದು ಹೋಮ ಹವನದಲ್ಲಿ ಭಾಗವಹಿಸಿದ್ದೆ .
ಇದು ಯಾವುದೇ ರೀತಿಯ ರಾಜಕೀಯ ಉದ್ದೇಶದಿಂದ ಮಾಡಿರುವಂತಹುದಲ್ಲ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಕಾರ್ಯಕರ್ತರ ಮನೆಗಳ ಮೇಲೆ ದಂಡೆತ್ತಿ ಹೋದ ಐ ಟಿ ಅಧಿಕಾರಿಗಳಿಗೆ ಯಾವುದಾದರೂ ನೋಟು ಎಣಿಸುವ ಯಂತ್ರ ಸಿಕ್ಕಿದೆಯೇ. ಈಶ್ವರಪ್ಪ ಅವರು ನೀರಾವರಿ ಸಚಿವರಾಗಿದ್ದಾರೆ ಅವರ ಮನೆಯಲ್ಲಿ ನೋಟು ಎಣಿಸುವ ಯಂತ್ರ ಗಳನ್ನು ಇಟ್ಟುಕೊಂಡಿದ್ದರು ಎಂಬುದನ್ನು ನೆನಪಿಸಿಕೊಳ್ಳಲು ಎಂದು ಹೇಳಿದರು.

ಈಶ್ವರಪ್ಪನವರಿಗೆ ಯಾರು ಯೋಗ್ಯರು ಎಂಬ ಸರ್ಟಿಫಿಕೇಟ್ ತೆಗೆದುಕೊಳ್ಳುವ ಅವಶ್ಯಕತೆ ನನಗಿಲ್ಲ. ಜನತೆ ನಮ್ಮ ನಡುವಳಿಕೆಗಳನ್ನು ನೋಡುತ್ತಿದ್ದಾರೆ.

ರಾಜಕೀಯ 20 ಲೋಕಸಭಾ ಕ್ಷೇತ್ರಗಳು ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ . ಮತದಾರರು ಕೂಡ ಮೈತ್ರಿಕೂಟದ ಅಭ್ಯರ್ಥಿಗೆ ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು

Body:ಹೇಮಾವತಿ ನದಿ ನೀರು ಹಂಚಿಕೆ ಕುರಿತು ವಿಭಿನ್ನ ಹೇಳಿಕೆಗಳನ್ನು ನೀಡುತ್ತಿರುವ ಅಂತಹ ತುಮಕೂರು ಜಿಲ್ಲೆಯ ಬಿಜೆಪಿ ನಾಯಕರಿಗೆ ದೇವೇಗೌಡರ ನೀರಾವರಿ ಯೋಜನೆಯ ಕುರಿತು ಹೋರಾಟ ಗೊತ್ತೇ. ಬಿಜೆಪಿ ನಾಯಕರು ಅಂದು ಹುಟ್ಟಿದ್ದರೆ ಎಂದು ಪ್ರಶ್ನಿಸಿದರು.

1962 ರಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ನೀರಿಗಾಗಿ ಹೋರಾಟ ಮಾಡಿದ ಪ್ರತಿಫಲವೇ ಇಂದಿನ ಹೇಮಾವತಿ ಜಲಾಶಯ ನಿರ್ಮಾಣವಾಗಿರುವುದಕ್ಕೆ ಸಾಕ್ಷಿ. ದೇವೇಗೌಡರ ಬಗ್ಗೆ ಏಕವಚನದಲ್ಲಿ ಮಾತನಾಡಿರುವ ಮಾಜಿ ಶಾಸಕ ಸುರೇಶ್ ಗೌಡ ಹುಟ್ಟಿದ್ದರೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಚಿಕ್ಕನಾಯಕನಹಳ್ಳಿ ಶಾಸಕ ಜಿ ಮಾಧು ಸ್ವಾಮಿ ಅವರ ಯಾವ ಕೋಡುಗೆ ಇದೆ. ಅಂದು ಮಾಧುಸ್ವಾಮಿ ರಾಜಕೀಯ ಕ್ಷೇತ್ರಕ್ಕೆ ಬಂದಿದ್ದರೆ. ನಾಲಿಗೆಯ ಇದೆ ಎಂದು ಕೀಳು ಅಭಿರುಚಿಯ ಮಾತುಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಕಟುವಾಗಿ ಟೀಕಿಸಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.