ETV Bharat / state

ಲೋಕಸಭೆ ಚುನಾವಣೆ ಸ್ಪರ್ಧೆ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ: ಡಿ.ಕೆ.ಸುರೇಶ್ - ಇನ್ನು ತೀರ್ಮಾನ ಮಾಡಿಲ್ಲ

ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿದ್ದು ಸಿದ್ಧತೆ ಮಾಡಿಕೊಳ್ಳಿ ಎಂದು ಡಿ.ಕೆ.ಸುರೇಶ್​ ಕಾರ್ಯಕರ್ತರಿಗೆ ತಿಳಿಸಿದರು.

MP D K Suresh
ಸಂಸದ ಡಿ ಕೆ ಸುರೇಶ್​
author img

By

Published : Jun 8, 2023, 4:08 PM IST

ಸಂಸದ ಡಿ.ಕೆ.ಸುರೇಶ್ ಹೇಳಿಕೆ​

ತುಮಕೂರು: ಕೆಲವರು ನಾನು ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ನಿಂತುಕೊಳ್ತೇನೋ ಇಲ್ಲವೋ ಎನ್ನುವುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್​ ತಿಳಿಸಿದರು.

ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ಇಂದು ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಾನು ಇನ್ನೂ ಗೊಂದಲದಲ್ಲಿದ್ದೇನೆ. ಈ ರಾಜಕಾರಣ ನನಗೆ ಬೇಕೋ ಬೇಡ್ವೊ ಎಂದೆನಿಸಿಬಿಟ್ಟಿದೆ. ಲೋಕಸಭಾ ಚುನಾವಣೆ ಹತ್ತಿರ ಬರುವಾಗ ಆ ಬಗ್ಗೆ ನಿಮ್ಮ ಸಲಹೆ ಪಡೆಯುತ್ತೇನೆ. ನನ್ನ ಗುರಿ ನಿಮ್ಮ ಸೇವೆ. ಕುಣಿಗಲ್ ತಾಲೂಕನ್ನು ಒಂದು ಮಾದರಿ ತಾಲೂಕನ್ನಾಗಿ ಮಾಡಬೇಕು ಅನ್ನೋದು ನನ್ನ ಆಶಯ. ಪ್ರತಿಯೊಬ್ಬರಿಗೂ ಒಂದಲ್ಲೊಂದು ಅಧಿಕಾರ ಸಿಗುತ್ತದೆ. ಆ ಸಮಯದಲ್ಲಿ ಏನೆಲ್ಲಾ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವೋ ಅದನ್ನೆಲ್ಲಾ ಮಾಡಬೇಕು ಎಂದರು.

ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕಾದರೆ ಗ್ರಾಮ ಪಂಚಾಯಿತಿ ಸದಸ್ಯರು ಶ್ರಮ ವಹಿಸಬೇಕು. ಶೇಕಡಾ 95ರಷ್ಟು ಯೋಜನೆಗಳು ಗ್ರಾಮ ಪಂಚಾಯಿತಿ ಸದಸ್ಯರ ಇಚ್ಛಾಶಕ್ತಿಯಿಂದ ತಲುಪಲು ಸಾಧ್ಯವಿದೆ ಎಂದು ಹೇಳಿದರು. ನಮ್ಮ ಸರ್ಕಾರ ಇದನ್ನು ಮಾಡುತ್ತಿದೆ. ನಾವು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಕೆಲಸ ಮಾಡಬೇಕಿದೆ. ಅದರ ಬದಲಾಗಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಜನಪ್ರತಿನಿಧಿಗಳು ಗುತ್ತಿಗೆ ವಿಷಯದಲ್ಲೂ ಅಥವಾ ಮತ್ತೆ ಯಾವುದೋ ವಿಷಯದಲ್ಲಿಯೂ ಕಿತ್ತಾಡಿಕೊಂಡರೆ, ಮತ್ತೊಂದೆಡೆ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಜನಪ್ರತಿನಿಧಿಗಳು ಸರ್ಕಾರದ ಇಂತಹ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ನಾಯಕತ್ವ ಬೆಳೆಸಿಕೊಳ್ಳುತ್ತಾರೆ. ನೀವು ಇಲ್ಲಿ ಕಿತ್ತಾಡಿಕೊಂಡಿರುತ್ತೀರಿ, ಆದರೆ ಅಲ್ಲಿ ಬಿಜೆಪಿ ಜೆಡಿಎಸ್​ನವರು ಆ ಕೆಲಸಗಳನ್ನು ಜನರಿಗೆ ಮಾಡಿಕೊಟ್ಟು, ನಿಮಗೆ ಸಿಗಬೇಕಾದ ಕ್ರೆಡಿಟ್​ ತೆಗೆದುಕೊಳ್ಳುತ್ತಾರೆ ಅಷ್ಟೇ ಎಂದು ಎಚ್ಚರಿಕೆ ನೀಡಿದರು.

ಹೀಗಾಗಿ ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕಾದರೆ ಶಾಸಕರ ಜೊತೆಗೆ ನೀವು ಕೈಜೋಡಿಸಿ ಕೆಲಸ ಮಾಡಬೇಕು. ಇನ್ನು ಮುಂದಿನ ಆರು ತಿಂಗಳೊಳಗೆ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಬರಲಿದ್ದು, ಅದಕ್ಕಾಗಿ ಸಿದ್ಧತೆಯನ್ನು ನೀವು ಮಾಡಿಕೊಳ್ಳಬೇಕು. ಅದು ಈ ರೀತಿ ಜನಪರ ಕೆಲಸಗಳನ್ನು ಮಾಡುವ ಮೂಲಕ, ಜನರ ನಂಬಿಕೆಯನ್ನು ಗಳಿಸಿಕೊಳ್ಳುವ ಮೂಲಕ ಚುನಾವಣೆಗೆ ಸಿದ್ಧರಾಗಿ ಎಂದು ಡಿ.ಕೆ.ಶಿವಕುಮಾರ್​ ಕಿವಿಮಾತು ಹೇಳಿದರು. ಪಕ್ಷದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರಿಗೂ ಅಧಿಕಾರ ಸಿಗಲಿದೆ. ಇದಕ್ಕಾಗಿ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುವುದು. ಆದರೆ ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದು ಹೇಳಿದರು. ಮಾನಸಿಕವಾಗಿ ಗೊಂದಲಕ್ಕೆ ಒಳಗಾಗಬೇಡಿ ಎಂದು ಡಿ.ಕೆ.ಸುರೇಶ್ ಕರೆ ಕೊಟ್ಟರು.

ಇದನ್ನೂ ಓದಿ: ಪೂರ್ವಾನುಮತಿ ಇಲ್ಲದೆ ಚುನಾವಣಾ ಪ್ರಚಾರ: ಸಂಸದ ಡಿ ಕೆ ಸುರೇಶ್​ ವಿರುದ್ಧದ ಪ್ರಕರಣ ರದ್ದು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.