ತುಮಕೂರು: ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ವಿವಾಹವನ್ನು ತಡೆ ಹಿಡಿಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ಮದುವೆ ಬಂಧನದಿಂದ ರಕ್ಷಿಸಲಾಗಿದೆ.
ಮಧುಗಿರಿ ತಾಲೂಕಿನಲ್ಲಿ 16 ವರ್ಷದ ಬಾಲಕಿಗೆ ಮದುವೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಮಧುಗಿರಿ ಸಿಡಿಪಿಒ ಅನಿತಾ ಮತ್ತು ತಹಶೀಲ್ದಾರ್ ವಿಶ್ವನಾಥ್ ಬಾಲಕಿಯ ಪೋಷಕರಿಗೆ ಕಾನೂನಿನ ಅರಿವು ಮೂಡಿಸಿದರು. ಜನವರಿ 6 ಮತ್ತು 7 ರಂದು ಮದುವೆ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಇನ್ನೊಂದೆಡೆ ಈ ಯುವತಿಯನ್ನು ಮದುವೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದ ಯುವಕನ ಮನೆಗೆ ತೆರಳಿದ ಪಾವಗಡ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಾಲ್ಯವಿವಾಹದ ಕುರಿತು ಅರಿವು ಮೂಡಿಸಿದ್ದಾರೆ. ಮಧುಗಿರಿಯಲ್ಲಿ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ ಯುವಕ ಹಾಗೂ ಕುಟುಂಬದವರಿಂದ ಅಧಿಕಾರಿಗಳು ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಅಲ್ಲದೆ ಬಾಲಕಿಗೆ 18 ವರ್ಷವಾದ ನಂತರ ಮದುವೆ ಮಾಡಿಕೊಳ್ಳುವುದಾಗಿ ಬರೆಸಿಕೊಳ್ಳಲಾಗಿದೆ.