ತುಮಕೂರು: ಇಂದು 15 ವರ್ಷದ ಬಾಲಕನಲ್ಲಿ ಸೋಂಕು ದೃಢವಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ.
ಸೋಂಕಿತ ಬಾಲಕ ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕಹಳ್ಳಿಯವನಾಗಿದ್ದು, ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ಎನ್ನಲಾಗುತ್ತಿದೆ.
ಸೋಂಕಿನಿಂದ 39 ಮಂದಿ ಗುಣಮುಖರಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಇನ್ನೂ 16 ಮಂದಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 868 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, 1205 ಮಂದಿಯ ಗಂಟಲು ದ್ರವದ ಪರೀಕ್ಷೆಯ ವರದಿಗಾಗಿ ಜಿಲ್ಲಾ ಆಡಳಿತ ನಿರೀಕ್ಷೆಯಲ್ಲಿದೆ. ಇದುವರೆಗೂ 16,130 ಮಂದಿಯ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 14,677 ಮಂದಿಯಲ್ಲಿ ನೆಗೆಟಿವ್ ಕಂಡು ಬಂದಿದೆ. ಇಂದು ಒಂದೇ ದಿನ 690 ಮಂದಿಯ ಗಂಟಲು ದ್ರವದ ಸ್ಯಾಂಪಲ್ಗಳನ್ನು ಪಡೆಯಲಾಗಿದೆ.