ಬೆಂಗಳೂರು: ಇಂದಿನಿಂದ ತುಮಕೂರು ರಸ್ತೆಯ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.
ಈ ಬಗ್ಗೆ ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿ ವಿಷಯ ಹಂಚಿಕೊಂಡಿದ್ದಾರೆ. ಇಂದು ಸಂಜೆಯಿಂದ ಲಘು ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮೇಲ್ಸೇತುವೆಯನ್ನು ಎರಡು ದಿನದೊಳಗೆ ಲಘು ವಾಹನಗಳಿಗೆ ಮುಕ್ತಗೊಳಿಸಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದರು.
ಓದಿ: ಸಿಲಿಂಡರ್ ಬೆಲೆ ಏರಿಕೆ ಪರಿಣಾಮ.. ಮತ್ತೆ ಸೌದೆ ಒಲೆಗೆ ಮೊರೆ ಹೋಗುತ್ತಿರುವ ಉಜ್ವಲ್ ಯೋಜನೆ ಫಲಾನುಭವಿಗಳು
ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೇಲ್ಸೇತುವೆ ತಜ್ಞರ ಅಭಿಪ್ರಾಯ ಪಡೆದ ಬಳಿಕ ಮೇಲ್ಸೇತುವೆಯನ್ನು ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಕಳೆದ ಎರಡು ತಿಂಗಳಿಂದ ತುಮಕೂರು ರಸ್ತೆ ಮೇಲ್ಸೇತುವೆ ದುರಸ್ತಿ ಕಾರ್ಯ ನಡೆಯುತ್ತಿದೆ. ಇದರಿಂದ ಎರಡು ತಿಂಗಳಿಂದ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ನಿಂದ ಜನರು ಪರದಾಡುತ್ತಿದ್ದಾರೆ. ಇದೀಗ ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ.