ತುಮಕೂರು: ಹೊರ ರಾಜ್ಯದ ಕಾರ್ಮಿಕರಿಗೆ ಊರುಗಳಿಗೆ ತೆರಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಇನ್ನೊಂದೆಡೆ, ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿದ್ದ ಎತ್ತಿನಹೊಳೆ ಕಾಮಗಾರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಹೊರ ರಾಜ್ಯದ ಕಾರ್ಮಿಕರಿಗೆ ದಿಕ್ಕೇ ತೋಚದಂತಾಗಿದೆ.
20 ಮಂದಿ ಹೊರರಾಜ್ಯದ ಕಾರ್ಮಿಕರು ವಾಪಸ್ ತಮ್ಮ ಊರುಗಳಿಗೆ ತೆರಳಲು ಹೆಣಗಾಡುತ್ತಿದ್ದಾರೆ. ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್ ಮೂಲದ ಕಾರ್ಮಿಕರಾಗಿದ್ದು ಹಲವುದಿನಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದರೂ ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗಿರಲಿಲ್ಲ.
ಕಳೆದ ಎರಡು ತಿಂಗಳಿನಿಂದ ಗುತ್ತಿಗೆದಾರರಿಂದ ಯಾವುದೇ ರೀತಿಯ ವೇತನ ಕೂಡ ಬಂದಿಲ್ಲ, ಕೆಲಸ ಮಾಡಲು ಗುತ್ತಿಗೆದಾರರು ಒತ್ತಡ ಹೇರುತ್ತಿದ್ದಾರೆ. ತಮ್ಮ ಬಳಿ ಪಡಿತರ ಕೂಡ ಸಮರ್ಪಕವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.