ETV Bharat / state

ಸಿದ್ದಗಂಗಾ ಮಠದ 3000ಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ ವ್ಯಾಕ್ಸಿನ್.. - children vaccinated at Siddaganga Mata

ಕೇಂದ್ರ ಸರ್ಕಾರ 15 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೂ ವ್ಯಾಕ್ಸಿನ್ ನೀಡುವ ನಿರ್ಧಾರಕ್ಕೆ ಬಂದಿರುವುದು ಸ್ವಾಗತಾರ್ಹವಾಗಿದೆ ಎಂದು ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ..

over-3000-children-vaccinated-at-siddaganga-mata-in-tumkur
ಮಕ್ಕಳಿಗೆ ವ್ಯಾಕ್ಸಿನ್
author img

By

Published : Jan 4, 2022, 4:24 PM IST

ತುಮಕೂರು : ಸಿದ್ದಗಂಗಾ ಮಠದ 3000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ. ಮಠದಲ್ಲಿ 15 ವರ್ಷ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಸ್ಥಳಕ್ಕೆ ಬಂದು ವ್ಯಾಕ್ಸಿನ್ ನೀಡಿದ್ದಾರೆ.

ಈ ಕುರಿತಂತೆ ಈಟಿವಿ ಭಾರತ್ ಜೊತೆ ಮಾತನಾಡಿದ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕೇಂದ್ರ ಸರ್ಕಾರ 15 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೂ ವ್ಯಾಕ್ಸಿನ್ ನೀಡುವ ನಿರ್ಧಾರಕ್ಕೆ ಬಂದಿರುವುದು ಸ್ವಾಗತಾರ್ಹವಾಗಿದೆ. ಇದರಿಂದ ಪ್ರತಿಯೊಬ್ಬ 15 ವರ್ಷ ಮೇಲ್ಪಟ್ಟ ಮಕ್ಕಳು ವ್ಯಾಕ್ಸಿನ್ ತೆಗೆದುಕೊಳ್ಳಬೇಕಾಗಿದೆ.

ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಾತನಾಡಿರುವುದು..

ಈ ಮೂಲಕ ಕೊರೊನಾ ಸೋಂಕಿನಿಂದ ಪಾರಾಗಬೇಕಿದೆ. ಅನೇಕ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅನೇಕ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡು ಬರುತ್ತಿದೆ.

ವ್ಯಾಕ್ಸಿನ್​ ತೆಗೆದುಕೊಂಡರೆ ಆ ಮಕ್ಕಳು ಆರೋಗ್ಯವಂತರಾಗಿ ಬದುಕಬಹುದಾಗಿದೆ. ಅದೇ 15 ವರ್ಷ ವಯಸ್ಸಿನ ಕೆಳಗಿನ ಮಕ್ಕಳಿಗೂ ಕೂಡ ವ್ಯಾಕ್ಸಿನ್ ನೀಡಿದರೆ ಆರೋಗ್ಯವಂತರಾಗಿರಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಓದಿ: ಕೊರೊನಾ ಬೆಂಗಳೂರಿನಲ್ಲಿ ಹೆಚ್ಚಾದ್ರೆ ರಾಜ್ಯಕ್ಕೆ ಅನ್ವಯಿಸಬೇಡಿ.. ಶಾಲೆಗಳ ಬಂದ್​ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟ ಆಕ್ಷೇಪ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.