ತುಮಕೂರು: ಮುಖ್ಯ ಶಿಕ್ಷಕಿ ಸರಿಯಾಗಿ ಪಾಠ ಮಾಡದಿರುವುದರಿಂದ, ಮಕ್ಕಳಿಗೆ ನೀಡಬೇಕಾದ ಸೌಲಭ್ಯಗಳನ್ನು ಒದಗಿಸದೇ ಇರುವುದರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟದಲ್ಲಿ ಕುಂಠಿತವಾಗುತ್ತಿದೆ ಎಂದು ಆರೋಪಿಸಿ ಪೋಷಕರು ಮತ್ತು ಮಕ್ಕಳು ಶಾಲೆ ಎದುರೇ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಎಂಬುವವರು ಸರಿಯಾಗಿ ಪಾಠ ಮಾಡುತ್ತಿಲ್ಲ ಎಂದು ಒಂದು ವರ್ಷದಿಂದ ಶಿಕ್ಷಣ ಇಲಾಖೆಯ ಗಮನಕ್ಕೆ ತರಲಾಗಿತ್ತು. ಅಲ್ಲದೇ ಅವರು ಪಠ್ಯೇತರ ಚಟುವಟಿಕೆಗಳಿಗೂ ಗಮನ ಹರಿಸುತ್ತಿಲ್ಲ. ಇದಕ್ಕೆ ಯಾವುದೇ ರೀತಿಯ ಕ್ರಮವನ್ನು ಈವರೆಗೂ ತೆಗೆದುಕೊಂಡಿಲ್ಲ. ಹಾಗಾಗಿ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎನ್ನುತ್ತಾರೆ ಗ್ರಾಮಸ್ಥರು.
ಇದನ್ನೂ ಓದಿ: ಮಹಾರಾಷ್ಟ್ರ ಗಡಿಮುಟ್ಟಲು ಕರವೇ ನಿರ್ಧಾರ - ಬೆಂಗಳೂರಿನಿಂದ ಹೊರಟ ಜಾಥಾ
ಶಿಕ್ಷಣ ಇಲಾಖೆಯ ಬಿಇಒ ಸ್ಥಳಕ್ಕೆ ಬಂದರೆ ಗ್ರಾಮಸ್ಥರು ಮಾಡುತ್ತಿರುವ ಆರೋಪಗಳಿಗೆ ಸ್ಪಷ್ಟ ಉತ್ತರ ದೊರೆಯಲಿದೆ ಎನ್ನುತ್ತಾರೆ ಶಾಲೆಯ ಮುಖ್ಯ ಶಿಕ್ಷಕಿ.