ತುಮಕೂರು: ಸರ್ಕಾರದ ವಿರುದ್ಧವಾಗಿ ಮಾತನಾಡುತ್ತಿರುವವರನ್ನು ಪಕ್ಷ ಗಮನಿಸಿ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ನೂತನ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿದ್ದರೂ ವರಿಷ್ಠರು, ಮುಖ್ಯಮಂತ್ರಿಗಳು ಇರುತ್ತಾರೆ. ಅವರೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಬೇಕು. ಅದನ್ನು ಬಿಟ್ಟು ಮಾಧ್ಯಮಗಳಲ್ಲಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಈ ಹಿಂದಿನ ಸರ್ಕಾರದಲ್ಲಿ ನಾನು ವಸತಿ ಖಾತೆ ಸಚಿವನಾಗಿದ್ದೆ. ಹಾಗಾಗಿ ಜನಪರವಾದ ಕೆಲಸ ಮಾಡಲು ಒಳ್ಳೆಯ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮಾಡಿಕೊಂಡಿದ್ದೇನೆ ಎಂದು ಇದೇ ವೇಳೆ ತಿಳಿಸಿದರು.