ETV Bharat / state

ಪಾವಗಡ ಬಸ್​ ಅಪಘಾತ : ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿ ಎಂದ ಹೆಚ್​ಡಿಕೆ

author img

By

Published : Mar 20, 2022, 4:18 PM IST

Updated : Mar 20, 2022, 4:58 PM IST

ಅಧಿಕಾರಿಗಳು ಈ ಅವಘಡದ ಬಗ್ಗೆ ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸಬೇಕು. ಅಲ್ಲದೆ ಗ್ರಾಮೀಣ ಪ್ರದೇಶಗಳಿಗೆ ಸರ್ಕಾರಿ ಸಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸುವ ಕುರಿತಂತೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು..

Pavagada bus accident
ಪಾವಗಡ ಬಸ್​ ಅಪಘಾತ

ತುಮಕೂರು : ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್‌ ದುರಂತದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನೀಡುವ ಬದಲು, ಕನಿಷ್ಟ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಖಾಸಗಿ ಬಸ್​ಗಳ ಪರ್ಮಿಟ್ ಕ್ಯಾನ್ಸಲ್ ಮಾಡುವ ನಿರ್ಧಾರವನ್ನು ಸಚಿವರು ವ್ಯಕ್ತಪಡಿಸುತ್ತಿದ್ದಾರೆ. ಇದರ ಬದಲು ಯಾವುದೇ ರೀತಿಯ ಲಾಭ-ನಷ್ಟ ನೋಡದೇ, ಪ್ರತಿ ಗ್ರಾಮಕ್ಕೂ ಸರ್ಕಾರಿ ಸಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಹೆಚ್​ಡಿಕೆ ಸರ್ಕಾರವನ್ನು ಒತ್ತಾಯಿಸಿದರು.

ಬಸ್​ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ ನೀಡಿ ಎಂದ ಹೆಚ್​ಡಿಕೆ

ತುಮಕೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾವಗಡ ಬಸ್ ದುರಂತದ ಗಾಯಾಳುಗಳ ಆರೋಗ್ಯವನ್ನು ಹೆಚ್​ಡಿಕೆ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಈ ಅವಘಡದ ಬಗ್ಗೆ ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸಬೇಕು. ಅಲ್ಲದೆ ಗ್ರಾಮೀಣ ಪ್ರದೇಶಗಳಿಗೆ ಸರ್ಕಾರಿ ಸಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸುವ ಕುರಿತಂತೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಪಾವಗಡ ಅಪಘಾತ : ಬಸ್​ನ ಮೇಲಿದ್ದರು 40ಕ್ಕೂ ಹೆಚ್ಚು ಮಂದಿ!

Last Updated : Mar 20, 2022, 4:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.