ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದೆ ಶಾಂತಿಯುತ ಮತದಾನ ನಡೆಯಿತು. 77.11 ಶೇಕಡಾವಾರು ಮತದಾನವಾಗಿದ್ದು, ಕಳೆದ ಬಾರಿಗಿಂತ ಶೇಕಡಾ ಐದರಷ್ಟು ಹೆಚ್ಚುವರಿಯಾಗಿ ಮತದಾನವಾಗಿದೆ. 2014ರಲ್ಲಿ 72.47ರಷ್ಟು ಮತದಾನವಾಗಿತ್ತು.
16,08,000 ಮತದಾರರಿದ್ದು ಅದ್ರಲ್ಲಿ 12,38,624 ಮಂದಿ ಮತ ಚಲಾಯಿಸಿದ್ದರು. ಅದರಲ್ಲಿ 629248 ಪುರುಷರು ಮತ್ತು 6,09,362 ಮಹಿಳೆಯರು ಮತ್ತು 12 ಮಂದಿ ಇತರರು ಮತ ಚಲಾವಣೆ ಮಾಡಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳು ಬರಲಿದ್ದು ಅತಿ ಹೆಚ್ಚು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ 81.87 ಶೇಖರ್ ಅವರ ಮತದಾನವಾಗಿದ್ದು, ಅತಿ ಕಡಿಮೆ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 65.42ರಷ್ಟಾಗಿದೆ.
ಬೆಳಗ್ಗಿನಿಂದಲೂ ಮತದಾರರು ಉತ್ಸುಕರಾಗಿ ಮತಗಟ್ಟೆ ಬಳಿ ತೆರಳಿ ಮತ ಚಲಾವಣೆ ಮಾಡಿದ್ದು ಸಾಮಾನ್ಯವಾಗಿತ್ತು. ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶದಲ್ಲಿ ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕ್ಷೇತ್ರದಾದ್ಯಂತ 34 ಕಡೆ ಇವಿಎಂಗಳಲ್ಲಿ ದೋಷ ಕಂಡು ಬಂದಿತ್ತು. ನಂತರ ಸ್ಥಳಕ್ಕೆ ತೆರಳಿ ಚುನಾವಣಾ ಸಿಬ್ಬಂದಿ ಸರಿಪಡಿಸಿ ಮತದಾನಕ್ಕೆ ಅನುವು ಮಾಡಿಕೊಟ್ಟರು. ತುರುವೇಕೆರೆ ತಾಲೂಕಿನಲ್ಲಿ ಬೂತ್ವೊಂದರಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು.
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಮಠದ ಆವರಣದಲ್ಲಿರುವ ಸನಿವಾಸ ಪ್ರೌಢಶಾಲೆಯಲ್ಲಿ ತೆರೆಯಲಾಗಿದ್ದ ಮತಗಟ್ಟೆಯಲ್ಲಿ ಮತದಾನ ನಡೆಯಿತು. ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೆಗ್ಗೆರೆಯ ಸಿದ್ಧಾರ್ಥ್ ನಗರದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು. ಬಿಜೆಪಿ ಅಭ್ಯರ್ಥಿ ಜಿ ಎಸ್ ಬಸವರಾಜ್ ಸಿದ್ದಗಂಗಾ ಮಹಿಳಾ ಕಾಲೇಜಿನಲ್ಲಿ ಕುಟುಂಬ ಸಮೇತರಾಗಿ ಬಂದು ಮತ ಚಲಾವಣೆ ಮಾಡಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಜೆಡಿಎಸ್ನ ಹೆಚ್ ಡಿ ದೇವೇಗೌಡ ಪರವಾಗಿ ಬಹುತೇಕ ಎಲ್ಲಾ ಮತಗಟ್ಟೆಗಳ ಬಳಿ ಕೇವಲ ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಮತದಾರರನ್ನು ಒಲಿಸಿಕೊಳ್ಳುವ ಕಸರತ್ತು ನಡೆದಿತ್ತು. ಆದರೆ ಯಾವುದೇ ಕಾಂಗ್ರೆಸ್ ಕಾರ್ಯಕರ್ತರು ಕಾಣಿಸಿಕೊಳ್ಳುತ್ತಿರುವುದು ಕೂಡ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.
ತುಮಕೂರು ಲೋಕಸಭಾ ಕ್ಷೇತ್ರ ಸಾಕಷ್ಟು ವಿಶೇಷತೆಗಳಿವೆ ಸಾಕ್ಷಿಯಾಗಿತ್ತು......
ತುಮಕೂರಿನ ಭಾಗ್ಯನಗರದ ಮತಗಟ್ಟೆಯಲ್ಲಿ ನವವಧು ನೇರವಾಗಿ ಮದುವೆ ಮಂಟಪದಿಂದ ಬಂದು ಮತಗಟ್ಟೆಯಲ್ಲಿ ಮತದಾನ ಮತದಾನ ಮಾಡಿದರು.
ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರಿನ ನಲ್ಲಿ ಶತಾಯುಷಿ 103 ವರ್ಷದ ಟಿ ಆರ್ ಶ್ರೀನಿವಾಸ ಶೆಟ್ಟಿ ತಮ್ಮ ಮೊಮ್ಮಕ್ಕಳ ಸಹಾಯದಿಂದ ಬಂದು ಮತ ಚಲಾಯಿಸಿದರು. ತುರುವೇಕೆರೆ ತಾಲೂಕಿನ ಚಾಕುವಳ್ಳಿಪಾಳ್ಯದ 105 ವರ್ಷದ ಅಜ್ಜಿ ದೊಡ್ಡ ತಾಯಮ್ಮ ಮತ ಚಲಾವಣೆ ಮಾಡುವ ಮೂಲಕ ಮಾದರಿಯಾದರು.
ಒಟ್ಟಾರೆ ಮಾಜಿ ಪ್ರಧಾನಿ ದೇವೇಗೌಡರ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದರಿಂದ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿವರ್ತನೆಗೊಂಡಿತ್ತು. ಮೇ 23ರಂದು ಮತ ಎಣಿಕೆ ನಡೆಯಲಿದ್ದು, ಮತದಾರರು ಯಾವ ರೀತಿ ಅಭ್ಯರ್ಥಿಗಳ ಭವಿಷ್ಯ ಬರೆದಿದ್ದಾರೆ ಎಂಬುದು ಸ್ಪಷ್ಟವಾಗಲಿದೆ.