ತುಮಕೂರು: ಶಿವಮೊಗ್ಗದಲ್ಲಿ ನಡೆಯುತ್ತಿರುವ 'ರೈತ ಮಹಾಪಂಚಾಯತ್' ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ದೆಹಲಿ ರೈತ ಹೋರಾಟದ ನಾಯಕ, ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಸಿಂಗ್ ಟಿಕಾಯತ್ ಅವರನ್ನು ಮಾರ್ಗಮಧ್ಯೆ ತುಮಕೂರಿನಲ್ಲಿ ರೈತರು ಸನ್ಮಾನಿಸಿದ್ದಾರೆ.
ತುಮಕೂರಿನ ಟೌನ್ ಹಾಲ್ ಸರ್ಕಲ್ನಲ್ಲಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆ ಮುಖಂಡರು ಅವರಿಗೆ ಎಳೆನೀರು ಕೊಟ್ಟು ಆತ್ಮೀಯವಾಗಿ ಬರಮಾಡಿಕೊಂಡರು. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಕೋರಿದ ಟಿಕಾಯತ್, ಕೇಂದ್ರ ಸರ್ಕಾರದ ಎಪಿಎಂಸಿ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಅದನ್ನು ವಿರೋಧಿಸಿಯೇ ತೀರುತ್ತೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ ಹಾಗೂ ವಿವಿಧ ರೈತಸಂಘದ ಮುಖಂಡರು ಹಾಜರಿದ್ದರು. ನಂತರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.