ತುಮಕೂರು : ಶಿರಾ ತಾಲೂಕು ಜೆಡಿಎಸ್ ಅಧ್ಯಕ್ಷ ಉಗ್ರೇಶ್ ಎಂಬುವರು ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಗೃತಿ ಮೂಡಿಸಲು ಉಚಿತವಾಗಿ ಹೆಲ್ಮೆಟ್ ಗಳನ್ನು ವಿತರಿಸುತ್ತಿದ್ದರು. ಈ ವೇಳೆ ಉಚಿತ ಹೆಲ್ಮೆಟ್ಗಳನ್ನು ಪಡೆಯಲು ಜನರು ಮುಗಿಬಿದ್ದ ಘಟನೆ ಶಿರಾ ಪಟ್ಟಣದಲ್ಲಿ ನಡೆಯಿತು.
ಶಿರಾ ಪಟ್ಟಣದ ಪ್ರವಾಸಿ ಮಂದಿರದ ಬಳಿ ಆಟೋದಲ್ಲಿ ಸುಮಾರು 500ಕ್ಕೂ ಹೆಚ್ಚು ಹೆಲ್ಮೆಟ್ ಗಳನ್ನು ಉಚಿತವಾಗಿ ವಿತರಿಸುತ್ತಿದ್ದರು. ಈ ಬಗ್ಗೆ ತಿಳಿದ ಸಾರ್ವಜನಿಕರು ಹೆಲ್ಮೆಟ್ ಪಡೆದುಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದರು. ಇದರಿಂದಾಗಿ ಪ್ರವಾಸಿ ಮಂದಿರದ ವೃತ್ತದ ಬಳಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ : ತುಮಕೂರು : ಆರು ದಶಕಗಳ ನಂತರ ತುಂಬಿ ಹರಿಯುತ್ತಿದೆ ಜಯಮಂಗಲಿ ನದಿ