ETV Bharat / state

ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ವೈದ್ಯರ ತಂಡ ರೆಡಿ: ಸಚಿವ ಶ್ರೀರಾಮುಲು - ಸಚಿವ ಶ್ರೀರಾಮುಲು ಲೆಟೆಸ್ಟ್​ ನ್ಯೂಸ್​​

ರಾಜ್ಯದಲ್ಲಿ ಮೊದಲ ಬಾರಿಗೆ ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಡಾ. ಯು.ಎಸ್.ವಿಶಾಲ್ ರಾವ್ ನೇತೃತ್ವದ ತಂಡ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಸಿದ್ಧವಾಗಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

Minister Sriramulu
ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ: ಸಚಿವ ಶ್ರೀರಾಮುಲು
author img

By

Published : Apr 25, 2020, 7:18 PM IST

ತುಮಕೂರು: ಕೊರೊನಾ ವೈರಸ್​ನಿಂದ ಬಳಲುತ್ತಿರುವ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡುವ ಪ್ರಯೋಗಕ್ಕೆ ಮುಂದಾಗಿದ್ದು, ಸೋಂಕಿನಿಂದ ಗುಣಮುಖರಾಗಿರುವವರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೋವಿಡ್-19 ನಿಯಂತ್ರಣದ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೊದಲ ಬಾರಿಗೆ ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಡಾ. ಯು.ಎಸ್.ವಿಶಾಲ್ ರಾವ್ ನೇತೃತ್ವದ ತಂಡ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಸಿದ್ಧವಾಗಿದೆ. ಆದ್ದರಿಂದ ರಾಜ್ಯದಲ್ಲಿ 489 ಪಾಸಿಟಿವ್ ಪ್ರಕರಣಗಳಲ್ಲಿ 153 ಜನರು ಗುಣಮುಖರಾಗಿದ್ದಾರೆ. ಇವರನ್ನು ಸಂಪರ್ಕ ಮಾಡುತ್ತಿದ್ದೇವೆ. ಇವರು 15 ದಿನಕ್ಕೊಮ್ಮೆ ರಕ್ತ ನೀಡಬಹುದು. ಗುಣಮುಖರಾದವರು ಸ್ವಯಂ ಪ್ರೇರಣೆಯಿಂದ ಬಂದು ನಮಗೆ ಸಹಕಾರ ನೀಡಬೇಕೆಂದು ಹೇಳಿದ್ರು.

ಜಿಲ್ಲೆಯಲ್ಲಿ ಖಾಸಗಿ ಕ್ಲಿನಿಕ್ ಹಾಗೂ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಐಎಲ್ಎ ಮತ್ತು ಸಾರಿ(SARI) ಲಕ್ಷಣಗಳಿರುವವರಿಗೆ ಕ್ವಾರಂಟೈನ್ ಮಾಡಲಾಗುತ್ತಿದೆ. ಈವರೆಗೂ 140 ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಡಿಹೆಚ್ಒ ಕಚೇರಿಯಲ್ಲಿ 2 ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ. ಜಿಲ್ಲೆಗೆ ಅಗತ್ಯವಾದ 8000 ರ‍್ಯಾಪಿಡ್ ​ಟೆಸ್ಟ್ ಕಿಟ್​ಗಳನ್ನು ನೀಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ 5 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 2.50 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ರು.

ಇನ್ನು, ರಾಜ್ಯದಲ್ಲಿ ಸದ್ಯ 19 ಪ್ರಯೋಗಾಲಯಗಳಿದ್ದು, ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆ 40 ಪ್ರಯೋಗಾಲಯಗಳನ್ನು ತೆರೆಯಲಾಗುವುದು ಎಂದು ಸಚಿವ ಶ್ರೀರಾಮುಲು ಇದೇ ವೇಳೆ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.