ತುಮಕೂರು: ಲಾಕ್ ಡೌನ್ ನಡುವೆಯೂ ರಸ್ತೆಯಲ್ಲಿ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದವರನ್ನು ತುಮಕೂರಿನಲ್ಲಿ ಪೊಲೀಸರು ತರಾಟೆಗೆ ತೆಗೆದುಕೊಂಡರು.
ಕೊರಟಗೆರೆ ಪಟ್ಟಣದ ರಸ್ತೆಯಲ್ಲಿ ಬೈಕ್ನಲ್ಲಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದರು. ಪಟ್ಟಣದ ಮುಖ್ಯರಸ್ತೆಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಕೈಗೆ ಸಿಕ್ಕ ಬೈಕ್ ಸವಾರರತ್ತ ಲಾಠಿ ಬೀಸಿದರು.
ಆಟೋಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕನನ್ನು ತರಾಟೆಗೆ ತೆಗೆದುಕೊಂಡರು.