ತುಮಕೂರು: ಪಾವಗಡ ಪಟ್ಟಣದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಯ ಮೇಲೆ ಖಚಿತ ಮಾಹಿಯ ಮೇರೆಗೆ ದಾಳಿ ನಡೆಸಿದ ಪಟ್ಟಣದ ಪೋಲಿಸರು 10 ಜನರನ್ನು ಬಂಧಿಸಿದ್ದಾರೆ.
ಪಟ್ಟಣದ ಪಳವಳ್ಳಿ ಗ್ರಾಮದ ಕಟುವ ಮಾರಮ್ಮನ ದೇವಾಲಯದ ಸಮೀಪದಲ್ಲಿ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳಿಂದ ₹3500 ಹಣ ವಶಪಡಿಸಿಕೊಂಡು ಪಟ್ಟಣದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ದಾಳಿ ವೇಳೆ ಪಟ್ಟಣದ ಪಿಎಸ್ಐ ರಾಘವೇಂದ್ರ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.