ತುಮಕೂರು: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದ ಆರೋಪಿಯ ಕೃತ್ಯ ಸಾಬೀತಾಗಿದೆ.
ಆರೋಪಿಗೆ ತುಮಕೂರಿನ ಮೂರನೇ ಅಧಿಕ ಜಿಲ್ಲಾ ಸತ್ರ ವಿಶೇಷ ನ್ಯಾಯಾಲಯ 3 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್. ಕೃಷ್ಣಯ್ಯ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ವಿಶೇಷ ಅಭಿಯೋಜಕ ಜಿ.ವಿ.ಗಾಯತ್ರಿ ರಾಜು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.