ತುಮಕೂರು: ಖಾಸಗಿ ವೈದ್ಯರಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳಿರುವ ರೋಗಿಗಳು ಕಂಡು ಬಂದ ತಕ್ಷಣ ತಾಲೂಕು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು, ತಪ್ಪಿದರೆ ಕೆಪಿಎಂಇ ಹಾಗೂ ಎಪೆಡಿಮಿಕ್ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ತುಮಕೂರು, ಕುಣಿಗಲ್ ಮತ್ತು ಗುಬ್ಬಿ ತಾಲೂಕುಗಳ ವ್ಯಾಪ್ತಿಯಲ್ಲಿರುವ ಖಾಸಗಿ ಕ್ಲಿನಿಕ್, ಆಸ್ಪತ್ರೆ, ನರ್ಸಿಂಗ್ ಹೋಮ್ಗಳಿಗೆ ಚಿಕಿತ್ಸೆಗೆಂದು ಬಂದ ರೋಗಿಗಳಲ್ಲಿ ಕೋವಿಡ್-19 ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ವೈದ್ಯರು ತಮ್ಮ ವ್ಯಾಪ್ತಿಯ ತಾಲೂಕು ಆರೋಗ್ಯಾಧಿಕಾರಿಗಳು, ತಾಲೂಕು ಕಾರ್ಯಕ್ರಮ ಸಂಯೋಜಕರಿಗೆ ತುರ್ತಾಗಿ ಮಾಹಿತಿ ನೀಡಬೇಕು ಎಂದಿದೆ.