ETV Bharat / state

ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡುವಂತೆ ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್ ಸೂಚನೆ

ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ಸರಿಪಡಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಎಂ. ರವಿಕುಮಾರ್ ಸೂಚನೆ ನೀಡಿದ್ದಾರೆ.

Progress Review Meeting
ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
author img

By

Published : May 6, 2020, 11:17 PM IST

ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ಸರಿಪಡಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಎಂ. ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್​ಗಳ ಮೂಲಕ ನೀರು ಸರಬರಾಜು ಮಾಡಲಾಗಿದ್ದು, ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದುರಸ್ತಿಯಲ್ಲಿರುವ ಆರ್.ಒ ಪ್ಲಾಂಟ್​ಗಳನ್ನು ಪಟ್ಟಿ ಮಾಡಿ, ದುರಸ್ತಿಯಾಗಿರುವ ಘಟಕದಲ್ಲಿ ದುರಸ್ತಿಯಲ್ಲಿದೆ ಎಂದು ಬೋರ್ಡ್ ಹಾಕಬೇಕು. ಅಲ್ಲದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಕಾರ್ಯನಿರ್ವಹಿಸುವ ವಾಟರ್ ಮ್ಯಾನ್​ಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಘಟಕ ನಿರ್ವಹಿಸುವ ಬಗ್ಗೆ, ಸಣ್ಣ ಪುಟ್ಟ ರಿಪೇರಿ ಬಗ್ಗೆ ತರಬೇತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.