ETV Bharat / state

ಕೇಂದ್ರ ಸರ್ಕಾರದ ವಿರುದ್ಧ ತುಮಕೂರಿನಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ತುಮಕೂರಿನ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಪ್ರತಿಭಟನಾ ನಿರತ ಕಾಂಗ್ರೆಸ್​​ ಕಾರ್ಯಕರ್ತರು
author img

By

Published : Nov 25, 2019, 6:57 PM IST

ತುಮಕೂರು: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬರುತ್ತಿದೆ. ಇದರಿಂದ ಸಾರ್ವಜನಿಕರು ದಂಗೆ ಏಳುವ ಕಾಲ ಸನಿಹದಲ್ಲಿಯೇ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿ ಇಂತಿಯಾಜ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನಾನಿರತ ಕಾಂಗ್ರೆಸ್​​ ಕಾರ್ಯಕರ್ತರು

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್​​ನ ಅಸಂಘಟಿತ ಕಾರ್ಮಿಕ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಇಂತಿಯಾಜ್ ಅಹಮದ್ ಮಾತನಾಡಿ, ಅಚ್ಚೇ ದಿನ್ ಬರುತ್ತದೆ. ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳುವ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದ ಬಿಜೆಪಿ ಸರ್ಕಾರ, ಅಂದಿನಿಂದಲೂ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬರುತ್ತಿದೆ. ಇದರಿಂದ ರೋಸಿ ಹೋಗಿರುವ ಸಾರ್ವಜನಿಕರು ದಂಗೆ ಏಳುವ ಕಾಲ ಸನಿಹದಲ್ಲಿಯೇ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಅಸಂಘಟಿತ ಕಾರ್ಮಿಕರಿಗೆ ಉಪಯೋಗವಾಗುವಂತಹ ಕಾನೂನುಗಳನ್ನು ಜಾರಿಗೊಳಿಸಿ. ಇಲ್ಲವಾದಲ್ಲಿ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೇರೆಯವರಿಗೆ ಆಡಳಿತ ನಡೆಸಲು ದಾರಿ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

Intro:ತುಮಕೂರು: 2014ರಲ್ಲಿ ಅಚ್ಚೇ ದಿನ್ ಬರುತ್ತದೆ, ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳುವ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಂದಿನಿಂದಲೂ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬರುತ್ತಿದೆ. ಇದರಿಂದ ರೋಸಿಹೋಗಿರುವ ಸಾರ್ವಜನಿಕರು ದಂಗೆ ಏಳುವ ಕಾಲ ಸನಿಹದಲ್ಲಿಯೇ ಇದೆಯೆಂದು ಕೇಂದ್ರ ಸರ್ಕಾರದ ವಿರುದ್ಧ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿ ಇಂತಿಯಾಜ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದರು.

Body:ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ನ ಅಸಂಘಟಿತ ಕಾರ್ಮಿಕ ಸಮಿತಿಯ ಮುಖಂಡರು ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ಜಿಲ್ಲಾಧ್ಯಕ್ಷ ಆರ್. ರಾಮಕೃಷ್ಣ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದೇ ವೇಳೆ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿ ಇಂತಿಯಾಜ್ ಅಹಮದ್ ಮಾತನಾಡಿ, 2014ರಲ್ಲಿ ಅಚ್ಚೇ ದಿನ್ ಬರುತ್ತದೆ, ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳುವ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದ ಬಿಜೆಪಿ ಸರ್ಕಾರ ಅಂದಿನಿಂದಲೂ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬರುತ್ತಿದೆ ಇದರಿಂದ ರೋಸಿಹೋಗಿರುವ ಸಾರ್ವಜನಿಕರು ದಂಗೆ ಏಳುವ ಕಾಲ ಸನಿಹದಲ್ಲಿಯೇ ಇದೆಯೆಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ದೇಶದಲ್ಲಿ ಕಾರ್ಮಿಕರಿಗಾಗಿ ಇರುವ 44 ಕಾನೂನುಗಳನ್ನು ನಾಲ್ಕು ಭಾಗಗಳನ್ನಾಗಿ ಮಾಡುವ ಮೂಲಕ ಕಾರ್ಮಿಕರಿಗೆ ಇರುವ ಕಾನೂನು ಭದ್ರತೆಯನ್ನು ತೆಗೆಯಲು ಬಿಜೆಪಿ ಸರ್ಕಾರ ಮುಂದಾಗಿದ್ದು ಕಾನೂನುಗಳನ್ನು ನಾಲ್ಕು ಭಾಗಗಳನ್ನಾಗಿ ಬದಲಾಗಿ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಈಗಾಗಲೇ ಪೀಣ್ಯ ಇಂಡಸ್ಟ್ರಿಯಲ್ ಏರಿಯಾಗಳಲ್ಲಿ ಇರುವಂತಹ ಕಾರ್ಖಾನೆಗಳು ಮುಚ್ಚುವಂತಹ ಪರಿಸ್ಥಿತಿಗೆ ಬಂದಿದೆ. ಅಸಂಘಟಿತ ಕಾರ್ಮಿಕರಿಗೆ ಉಪಯೋಗವಾಗುವಂತಹ ಕಾನೂನುಗಳನ್ನು ಜಾರಿ ಗೊಳಿಸಿ ಇಲ್ಲವಾದಲ್ಲಿ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೇರೆಯವರಿಗೆ ಆಡಳಿತ ನಡೆಸಲು ದಾರಿ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಬೈಟ್: ಇಂತಿಯಾಜ್ ಅಹಮದ್, ರಾಜ್ಯ ಕಾರ್ಯದರ್ಶಿ, ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ.

Conclusion:ಇದೇ ವೇಳೆ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.