ETV Bharat / state

'ಉದ್ಯೋಗ ಖಾತರಿ ಯೋಜನೆಯನ್ನು ನಗರ ಪ್ರದೇಶದ ಬಡವರಿಗೂ ವಿಸ್ತರಿಸಿ'

ಉದ್ಯೋಗ ಖಾತರಿ ಯೋಜನೆಯನ್ನು ನಗರದ ಬಡಜನರಿಗೂ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

Protest
ಪ್ರತಿಭಟನೆ
author img

By

Published : Jul 30, 2020, 4:35 PM IST

ತುಮಕೂರು: ಉದ್ಯೋಗ ಖಾತರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕೆಂದು ಆಗ್ರಹಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ಮನೆಗೆಲಸ, ಮರಗೆಲಸ ಮಾಡುವವರು, ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಲೈಂಗಿಕ ಅಲ್ಪಸಂಖ್ಯಾತರು ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ, ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು ಅನ್ನೋದು ಪ್ರತಿಭಟನಾಕಾರರ ಒತ್ತಾಯ.

ತೃತೀಯಲಿಂಗಿ ದೀಪಿಕಾ ಮಾತನಾಡಿ, ಲಾಕ್​ಡೌನ್​​ನಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ಉದ್ಯೋಗವಿಲ್ಲದೆ ಒಪ್ಪೊತ್ತಿನ ಊಟಕ್ಕೂ ಪರದಾಟ ತಪ್ಪುತ್ತಿಲ್ಲ. ನಮ್ಮಂತೆಯೇ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.