ತುಮಕೂರು: ಕೋವಿಡ್-19 ಸಂಕಷ್ಟದ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ದರವನ್ನು ಹೆಚ್ಚಿಸಿರುವುದರಿಂದ ಜನರಿಗೆ ಹೊರೆಯಾಗಿದೆ. ಕೊರೊನಾ ಸೋಂಕಿತರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಸ್ಯುಸಿಐ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಾಗೂ ಸೋಂಕಿತರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ಒದಗಿಸಲು ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ರು.
ಈ ವೇಳೆ ಮಾತನಾಡಿದ ಎಸ್.ಎನ್. ಸ್ವಾಮಿ, ದೇಶದಲ್ಲಿ ಲಾಕ್ಡೌನ್ ಪ್ರಾರಂಭವಾದಾಗಿನಿಂದಲೂ ರೈತರಿಗೆ, ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ ಒಂದಲ್ಲ ಒಂದು ರೀತಿಯಲ್ಲಿ ತೊಂದರೆಯಾಗಿದೆ. ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ, ಹೊಲದಲ್ಲಿಯೇ ಕೊಳೆಯಲು ಬಿಟ್ಟಿರುವುದನ್ನು ಕಾಣಬಹುದಾಗಿದೆ. ಎಲ್ಲಾ ವರ್ಗದ ಕೆಲಸಗಾರರು ಕೆಲಸವನ್ನು ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಹಸಿವಿನಿಂದ ಜನರು ಸಾಯುತ್ತಿರುವುದು ಸರ್ಕಾರಕ್ಕೆ ಕಾಣಿಸುತ್ತಿಲ್ಲ. ಸಾರ್ವಜನಿಕರು ಉದ್ಯೋಗ, ಭವಿಷ್ಯದ ಬಗ್ಗೆ ಯೋಚಿಸುತ್ತಾ ನರಳುತ್ತಿದ್ದಾರೆ. ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.