ETV Bharat / state

ಹೆಚ್.ಎಸ್. ದೊರೆಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ... ಮುಖ್ಯ ಕಾರ್ಯದರ್ಶಿ ಆಗಮನಕ್ಕೆ ಪಟ್ಟು - protest in tumkur

ಬಡ ಜನರಿಗೆ ಭೂಮಿ ಮತ್ತು ವಸತಿ ನೀಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು  ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್ ದೊರೆಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಹೆಚ್.ಎಸ್. ದೊರೆಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ
ಹೆಚ್.ಎಸ್. ದೊರೆಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ
author img

By

Published : Nov 29, 2019, 10:10 PM IST

ತುಮಕೂರು: ಬಡ ಜನರಿಗೆ ಭೂಮಿ ಮತ್ತು ವಸತಿ ನೀಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್ ದೊರೆಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟ ಕಾಲ ಪ್ರತಿಭಟನೆಗೆ ವಿವಿಧ ಜನಪರ ಸಂಘಟನೆಗಳ ಬೆಂಬಲ ವ್ಯಕ್ತವಾಗಿದೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್, ಪ್ರತಿ ತಿಂಗಳು ಮುಖ್ಯ ಕಾರ್ಯದರ್ಶಿಯವರ ಮೂಲಕ ವಸತಿ ವಂಚಿತರಿಗೆ ಭೂಮಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು. ಕಳೆದ ತಿಂಗಳಿನಲ್ಲಿ 36 ಎಕರೆಯನ್ನು ನಿವೇಶನ ರಹಿತ ರೈತರಿಗೆ ನೀಡಲಾಗಿದ್ದು, ಹಂತಹಂತವಾಗಿ ನಿವೇಶನ ರಹಿತ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು.

ಸಮಸ್ಯೆಯ ಬಗ್ಗೆ ಪ್ರಧಾನ ಕಾರ್ಯದರ್ಶಿಗಳ ಬಳಿ ಮಾತನಾಡಿ ಬಗೆಹರಿಸುತ್ತೇವೆ. ಅಲ್ಲಿಯವರೆಗೂ ಪ್ರತಿಭಟನೆಯನ್ನು ಸ್ಥಗಿತಗೊಳಿಸಬೇಕೆಂದು ಪ್ರತಿಭಟನಾಕಾರರಲ್ಲಿ ಮನವಿ ಮಾಡಿಕೊಂಡರು. ಆದರೆ ಜಿಲ್ಲಾಧಿಕಾರಿಗಳ ಮನವಿಗೆ ಸ್ಪಂದಿಸದ ಪ್ರತಿಭಟನಾಕಾರರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಬರುವವರೆಗೂ ನಮ್ಮ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಘೋಷಣೆ ಕೂಗಿದರು.

ಹೆಚ್.ಎಸ್. ದೊರೆಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ

ಇನ್ನು ಕಳೆದ ಮೂರು ವರ್ಷಗಳಿಂದ ಭೂಮಿ ಮತ್ತು ವಸತಿ ವಂಚಿತ ರೈತರಿಗೆ ಭೂಮಿ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡಿಕೊಂಡು ಬರಲಾಗುತ್ತಿದೆ. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತವು ಭೂಮಿ ವಂಚಿತರಿಗೆ ಸೌಲಭ್ಯ ದೊರಕಿಸಿಕೊಡುವಲ್ಲಿ ವಿಫಲವಾಗಿರುವ ಕಾರಣ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ.

Intro:ತುಮಕೂರು: ಮಧುಗಿರಿ ತಾಲೂಕಿನ ಬ್ಯಾಲ್ಯ ಗ್ರಾಮ ಸೇರಿದಂತೆ ತುಮಕೂರು ಜಿಲ್ಲೆಯಾದ್ಯಂತ ಬಡಜನರಿಗೆ ಭೂಮಿ ಮತ್ತು ವಸತಿ ನೀಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಜಿಲ್ಲಾಡಳಿತದ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್ ದೊರೆಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅನಿರ್ದಿಷ್ಟ ಕಾಲ ಆಹೋರಾತ್ರಿ ಪ್ರತಿಭಟನೆ ಎರಡನೇ ದಿನವು ಮುಂದುವರೆದಿದೆ.

Body:ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟ ಕಾಲ ಅಹೋರಾತ್ರಿ ಪ್ರತಿಭಟನೆ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಜನಪರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್, ಪ್ರತಿ ತಿಂಗಳು ಮುಖ್ಯ ಕಾರ್ಯದರ್ಶಿಯವರ ಮೂಲಕ ಭೂಮಿ ಮತ್ತು ವಸತಿ ವಂಚಿತರಿಗೆ ಭೂಮಿ ನೀಡುವ ಕಾರ್ಯ ಮಾಡಲಾಗುತ್ತಿದೆ, ಕಳೆದ ತಿಂಗಳಿನಲ್ಲಿ 36 ಎಕರೆಯನ್ನು ನಿವೇಶನ ರಹಿತ ರೈತರಿಗೆ ನೀಡಲಾಗಿದ್ದು, ಹಂತಹಂತವಾಗಿ ನಿವೇಶನ ರಹಿತ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು.
ಮಧುಗಿರಿ ತಾಲೂಕಿನ ಬ್ಯಾಲ್ಯದ ಸಮಸ್ಯೆ ಬಗ್ಗೆ ಪ್ರಧಾನ ಕಾರ್ಯದರ್ಶಿಗಳ ಬಳಿ ಮಾತನಾಡಿ ಬಗೆಹರಿಸುತ್ತೇವೆ, ಅಲ್ಲಿಯವರೆಗೂ ಈ ಪ್ರತಿಭಟನೆಯನ್ನು ಸ್ಥಗಿತಗೊಳಿಸಬೇಕೆಂದು ಪ್ರತಿಭಟನಾಕಾರರಲ್ಲಿ ಮನವಿ ಮಾಡಿಕೊಂಡರು.
ಜಿಲ್ಲಾಧಿಕಾರಿಗಳ ಮನವಿಗೆ ಸ್ಪಂದಿಸದ ಪ್ರತಿಭಟನಾಕಾರರು ಸರ್ಕಾರದ ಪ್ರಧಾನ ಕಾರ್ಯದರ್ಶಿ ಬರುವವರೆಗೂ ನಮ್ಮ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕಳೆದ ಮೂರು ವರ್ಷಗಳಿಂದ ಜಿಲ್ಲಾಡಳಿತ ಹಾಗೂ ಸರ್ಕಾರದ ಮಟ್ಟದಲ್ಲಿ ಭೂಮಿ ಮತ್ತು ವಸತಿ ವಂಚಿತ ರೈತರಿಗೆ ಭೂಮಿ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡಿಕೊಂಡು ಬರಲಾಗುತ್ತಿದೆ, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಭೂಮಿ ವಂಚಿತರಿಗೆ ಸೌಲಭ್ಯ ದೊರಕಿಸಿಕೊಡುವಲ್ಲಿ ವಿಫಲವಾಗಿರುವ ಕಾರಣ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಸರ್ಕಾರದ ಪ್ರಧಾನ ಕಾರ್ಯದರ್ಶಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ನಮ್ಮ ಮನವಿಯನ್ನು ಸ್ವೀಕರಿಸಿ, ಬರವಣಿಗೆಯ ಮೂಲಕ ನಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಿರಿಮನೆ ನಾಗರಾಜ್ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೈಟ್: ಸಿರಿಮನೆ ನಾಗರಾಜ್, ರಾಜ್ಯ ಸಮಿತಿ ಸದಸ್ಯ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ.

Conclusion:ವರದಿ
ಸುಧಾಕರ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.