ETV Bharat / state

ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ತುಮಕೂರಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ - latest protest for Yeddyurappas resign

ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ತುಮಕೂರಿನಲ್ಲಿ ಪ್ರತಿಭಟನೆ
author img

By

Published : Nov 5, 2019, 8:51 PM IST

ತುಮಕೂರು: ಬಿಜೆಪಿ ಸರ್ಕಾರ ರಚನೆಯಾಗಿ ಅನರ್ಹಗೊಂಡಿರುವ 17 ಶಾಸಕರು ಕಾರಣವೆಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿರುವ ಹೇಳಿಕೆಯನ್ನು ಒಪ್ಪಿಕೊಂಡಿರುವುದರಿಂದ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ತುಮಕೂರಿನಲ್ಲಿ ಪ್ರತಿಭಟನೆ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ ಮಾತನಾಡಿ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿರುವ ಧ್ವನಿ ತನ್ನದೇ ಎಂದು ಮುಖ್ಯಮಂತ್ರಿ ಅವರೇ ಒಪ್ಪಿಕೊಂಡಿದ್ದಾರೆ. ಅನರ್ಹ ಶಾಸಕರಿಗೆ ಪಕ್ಷದ ಹಿರಿಯ ಮುಖಂಡರು ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ, ಹಾಗಾಗಿಯೇ ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಗಿದೆ ಎಂದು ಹೇಳಿಕೆ ನೀಡಿರುವುದರಿಂದ ನೈತಿಕ ಹೊಣೆಹೊತ್ತು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಅಷ್ಟೇ ಅಲ್ಲದೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಹಿರಿಯ ಮುಖಂಡರು ಒಂದು ಆಡಳಿತ ಸರ್ಕಾರವನ್ನು ಕೆಡವಲು ಯಾವೆಲ್ಲ ರೀತಿಯ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ ಎಂಬುದನ್ನು ರಾಜ್ಯದ ಜನರು ಗಮನಿಸುತ್ತಿದ್ದು, ಮುಂದಿನ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಇನ್ನು, ಮಾಜಿ ಶಾಸಕ ರಫೀಕ್ ಅಹಮದ್ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸರ್ಕಾರದಿಂದ ವಜಾಗೊಳಿಸಬೇಕೆಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಾಗುವುದೆಂದು ತಿಳಿಸಿದರು.

Intro:ತುಮಕೂರು:

Body: ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಜೆಪಿ ಸರ್ಕಾರ ರಚನೆಯಾಗಿ ಅನರ್ಹಗೊಂಡಿರುವ 17 ಶಾಸಕರು ಕಾರಣ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿರುವ ಹೇಳಿಕೆಯನ್ನು ಒಪ್ಪಿಕೊಂಡಿರುವುದರಿಂದ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿರುವ ಧ್ವನಿ ತನ್ನದೇ ಎಂದು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಅನರ್ಹ ಶಾಸಕರಿಗೆ ಪಕ್ಷದ ಹಿರಿಯ ಮುಖಂಡರು ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ, ಹಾಗಾಗಿಯೇ ರಾಜ್ಯದಲ್ಲಿರುವ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಗಿದೆ ಎಂದು ಹೇಳಿಕೆ ನೀಡಿರುವುದರಿಂದ ನೈತಿಕ ಹೊಣೆಹೊತ್ತು ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಹಾಗೂ ಹಿರಿಯ ಮುಖಂಡರು ಒಂದು ಆಡಳಿತ ಸರ್ಕಾರವನ್ನು ಕೆಡವಲು ಯಾವೆಲ್ಲ ರೀತಿಯ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ ಎಂಬುದನ್ನು ರಾಜ್ಯದ ಜನರು ಗಮನಿಸುತ್ತಿದ್ದು, ಮುಂದಿನ ಉಪ ಚುನಾವಣೆಯಲ್ಲಿ ತಕ್ಕ ಪಾಠ ನೀಡಲಿದ್ದಾರೆ ಎಂದರು.
ಬೈಟ್: ಆರ್. ರಾಮಕೃಷ್ಣ, ಜಿಲ್ಲಾಧ್ಯಕ್ಷ, ಕಾಂಗ್ರೆಸ್.
ಮಾಜಿ ಶಾಸಕ ರಫೀಕ್ ಅಹಮದ್ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅನರ್ಹಗೊಂಡಿರುವ 17 ಶಾಸಕರ ಪರವಾಗಿ ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಕಾರಣ ಎಂದು ಒಪ್ಪಿಕೊಂಡಿದ್ದಾರೆ. ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರ ಅಣತಿಯಂತೆ ರಾಜೀನಾಮೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿಕೆ ನೀಡಿರುವುದು ತನ್ನದೇ ಎಂದು ಒಪ್ಪಿಕೊಂಡಿದ್ದಾರೆ. ಹಾಗಾಗಿ ಇಂತಹ ಭ್ರಷ್ಟ ಬಿಜೆಪಿಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಹಾಗೂ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಸರ್ಕಾರದಿಂದ ವಜಾಗೊಳಿಸಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಬೈಟ್: ರಫಿಕ್ ಅಹಮದ್, ಮಾಜಿ ಶಾಸಕ

Conclusion:ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.