ತುಮಕೂರು:ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ.ಭೂಬಾಲನ್ರನ್ನು ಮತ್ತೆ ಅದೇ ಜಾಗಕ್ಕೆ ಮರು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘ-ಸಂಸ್ಥೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಆಯುಕ್ತ ಭೂಬಾಲನ್ ಬೇಕೇಬೇಕು.. ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಗರದ ಟೌನ್ ಹಾಲ್ ವೃತ್ತದಲ್ಲಿ ಜನಪರ ಹೋರಾಟಗಾರರು, ರೈತ ಸಂಘಟನೆಗಳು ದಕ್ಷ ಅಧಿಕಾರಿ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ.ಭೂಬಾಲನ್ ಮರು ವರ್ಗಾವಣೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಬಿ.ಉಮೇಶ್, ಜನಪರ ಆಡಳಿತ ನಡೆಸುತ್ತಿದ್ದ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಭೂಬಾಲನ್ರನ್ನು ವರ್ಗಾವಣೆಗೊಳಿಸಲಾಗಿತ್ತು. ಇದನ್ನು ಖಂಡಿಸಿ ಈಗಾಗಲೇ ಅನೇಕ ಬಾರಿ ಪ್ರತಿಭಟನೆ ನಡೆಸಲಾಗಿದೆ. ಆಗ ಸ್ಥಳೀಯ ಸಂಸದರು ಹಾಗೂ ಶಾಸಕರು ಭೂಬಾಲನ್ರನ್ನು ವಾಪಸ್ ಕರೆಸಿಕೊಳ್ಳುತ್ತೇವೆ ಎಂದು ಹೇಳಿ ಸುಮ್ಮನಾಗಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.ನಗರಾಭಿವೃದ್ಧಿ ಮತ್ತು ಸ್ಮಾರ್ಟ್ ಸಿಟಿ ಅಭಿವೃದ್ಧಿಯ ಕಾಮಗಾರಿಗಳಿಗೆ ಅರ್ಥ ಬರಬೇಕಾದರೆ ಅವರು ನಗರಕ್ಕೆ ವರ್ಗಾವಣೆಯಾಗಿ ಬರಬೇಕಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಜೆ ಸಿ ಮಧುಸ್ವಾಮಿ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಮಾತ್ರ ಸೀಮಿತವಾಗದೆ, ಜಿಲ್ಲಾ ಕೇಂದ್ರದಲ್ಲಿ ಇದ್ದುಕೊಂಡು ಕೆಲಸ ಮಾಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.