ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಜನಸಂಪರ್ಕ ಸಭೆಯನ್ನ ಕೊರೊನ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋ. ನ. ವಂಶಿಕೃಷ್ಣ , ಈಗಾಗಲೇ ಪಾವಗಡ ಮತ್ತು ಶಿರಾ ತಾಲೂಕಿನಲ್ಲಿ ಜನಸಂಪರ್ಕ ಸಭೆ ನಡೆಸಲಾಗಿದೆ. ಮಾರ್ಚ್ ತಿಂಗಳಲ್ಲಿ ಉಳಿದೆಡೆ ಜನಸಂಪರ್ಕ ಸಭೆ ನಡೆಸಬೇಕಾಗಿತ್ತು. ಆದರೆ, ಹೆಚ್ಚು ಜನರು ಸಭೆಯಲ್ಲಿ ಇರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದರು.
ಅಲ್ಲದೇ ಕೊರೊನ ವೈರಸ್ ಹರಡುವಿಕೆ ನಿಯಂತ್ರಣಕ್ಕೆ ಬಂದ ನಂತರ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.