ತುಮಕೂರು: ಮೈತ್ರಿ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುವ ಸಂದರ್ಭದಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಿಂಥೆಟಿಕ್ ಟ್ರ್ಯಾಕ್ಗೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಆದರೆ, ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತಿದ್ದು, ಇಲ್ಲಿಯವರೆಗೂ ಕ್ರೀಡಾಂಗಣದಲ್ಲಿ ಯಾವುದೇ ಕಾಮಗಾರಿ ನಡೆಯದೇ ಇರುವುದು ಕ್ರೀಡಾಪಟುಗಳ ಬೇಸರಕ್ಕೆ ಕಾರಣವಾಗಿದೆ.
ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸುವುದರಿಂದ ಕ್ರೀಡಾಪಟುಗಳಿಗೆ ಉತ್ತಮ ರೀತಿಯ ತರಬೇತಿ ಪಡೆಯಲು ಅವಕಾಶ ದೊರೆತಂತಾಗುತ್ತದೆ. ಅಲ್ಲದೆ ಹೈಟೆಕ್ ರೀತಿಯಲ್ಲಿ ಕ್ರೀಡಾಂಗಣ ಬದಲಾಗುತ್ತದೆ ಎಂದು ಕ್ರೀಡಾಸಕ್ತರು ಉತ್ಸುಕತೆಯಿಂದ ಸಿಂಥೆಟಿಕ್ ಟ್ರ್ಯಾಕ್ ಯಾವಾಗ ಸಿದ್ದಗೊಳ್ಳುತ್ತದೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.
ಆದರೆ ಕ್ರೀಡಾಂಗಣ ಅಭಿವೃದ್ದಿಯನ್ನ ಕಾಣದೇ ಹಿಂದಿನ ಸ್ಥಿತಿಯಲ್ಲಿಯೇ ಇದೆ. ಇನ್ನು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದು, ಸಿಂಥೆಟಿಕ್ ಟ್ರ್ಯಾಕ್ ಬಗ್ಗೆ ಚಕಾರವೆತ್ತುತ್ತಿಲ್ಲ, ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಸಿಂಥೆಟಿಕ್ ಟ್ರ್ಯಾಕ್ ಬಗ್ಗೆ ಗಮನ ಹರಿಸುತ್ತದೆ ಎಂಬುದನ್ನು ಕಾದುನೋಡಬೇಕಿದೆ.