ತುಮಕೂರು: ಅಪ್ಪು ಸಾವಿನಲ್ಲೂ ಸಾರ್ಥಕತೆ ಮೆರೆದು ನೇತ್ರದಾನ ಮಾಡಿದ್ದರು. ಇದೇ ರೀತಿ ಜಿಲ್ಲೆಯ ಕುಣಿಗಲ್ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪುನೀತ್ ರಾಜ್ಕುಮಾರ್ ಅಭಿಮಾನಿ (Puneeth Rajkumar ಯೊಬ್ಬರು ತಮ್ಮ ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ತುಮಕೂರು ತಾಲೂಕು ಹೆಬ್ಬೂರು ಹೋಬಳಿ ಶ್ರೀಕಂಠನಪಾಳ್ಯ ಗ್ರಾಮದ ಕಾಂತರಾಜು (37) ನೇತ್ರದಾನ ಮಾಡಿದವರು. ಮೃತ ವ್ಯಕ್ತಿ ಪುನೀತ್ ಅವರ ಅಪ್ಪಟ ಅಭಿಮಾನಿಯಾಗಿದ್ದರಂತೆ.
ಅಪಘಾತ ನಡೆದಿದ್ದು ಹೇಗೆ?
ಕುಣಿಗಲ್ ತಾಲೂಕಿನ ಯಾಚಘಟ್ಟ ಗ್ರಾಮಕ್ಕೆ ಕಾಂತರಾಜು, ಹೆಂಡತಿ ಪಂಕಜ ಹಾಗೂ ಇಬ್ಬರು ಮಕ್ಕಳೊಂದಿಗೆ ಆಟೋದಲ್ಲಿ ಬಂದಿದ್ದರು. ವಾಪಸ್ ಬೆಂಗಳೂರಿಗೆ ಹಿಂತಿರುಗುವಾಗ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು ಹನುಮಾಪುರ ಬಳಿ ಮಾರುತಿ ಜಿಪ್ಸಿ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಕಾಂತರಾಜು ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಅಸುನೀಗಿದ್ದಾರೆ. ಪತ್ನಿ ಪಂಕಜ ಗಾಯಗೊಂಡಿದ್ದು, ಕುಣಿಗಲ್ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ನೀರು ಪಾಲಾದ ಭತ್ತ: ಕಂಗಾಲಾದ ಅನ್ನದಾತ