ತುಮಕೂರು: ಕೋವಿಡ್-19 ಫ್ರಂಟ್ ಲೈನ್ ವಾರಿಯರ್ಸ್ಗಳಾದ ಆಶಾ ಕಾರ್ಯಕರ್ತೆಯರ ಮೇಲೆ ದೈಹಿಕ ಹಲ್ಲೆ ಮಾಡಿದವರನ್ನು ಶಿಕ್ಷಿಸಿ, ಹಲ್ಲೆಗೆ ಒಳಗಾದವರಿಗೆ ಸೂಕ್ತ ಪರಿಹಾರ ನೀಡುವ ಜೊತೆಗೆ ಆಶಾ ಕಾರ್ಯಕರ್ತೆಯರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ದೇಶದೆಲ್ಲೆಡೆ ಕೊರೊನಾ ಹಬ್ಬಿದ್ದು, ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು, ಕೋವಿಡ್-19 ವಿರುದ್ಧ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಕಾರ್ಯಕರ್ತೆಯರ ಮೇಲೆ ನಡೆಯುತ್ತಿರುವ ಹಲ್ಲೆಗಳು ದಿನೇ ದಿನೆ ಹೆಚ್ಚಾಗುತ್ತಿವೆ, ಕೆಲ ಪುಂಡರ ಹಾಗೂ ಪಾನಮತ್ತರ ಕೆಂಗಣ್ಣಿಗೆ ಆಶಾ ಕಾರ್ಯಕರ್ತೆಯರು ಗುರಿಯಾಗುತ್ತಿದ್ದಾರೆ. ಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ತಿಳಿಸಲಾಯಿತು.
ನಂತರ ಮಾತನಾಡಿ, ನನ್ನ ಕಡೆಯಿಂದ ನಿಮಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನೀವು ಮಾಡುತ್ತಿರುವಂತಹ ಉತ್ತಮವಾದ ಕಾರ್ಯಗಳನ್ನು ಇದೇ ರೀತಿ ಮುಂದುವರಿಸಿಕೊಂಡು ಹೋಗಿ ಎಂದು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು.