ತುಮಕೂರು: ಕ್ಷುಲ್ಲಕ ಕಾರಣಕ್ಕೆ ಪತಿಯ ಮೇಲೆ ಪತ್ನಿಯೇ ಬಿಸಿ ಸಾಂಬಾರ್ ಸುರಿದಿರುವ ವಿಚಿತ್ರ ಪ್ರಕರಣ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ.
ರಂಗಾಪುರ ಗ್ರಾಮದ ನಿವಾಸಿ ಗಂಗಾಧರ್ ಗಾಯಗೊಂಡಿರುವ ವ್ಯಕ್ತಿ. ಈತ ಕೂಲಿ ಕೆಲಸ ಮಾಡಿಕೊಂಡಿದ್ದಾನೆ. ಕಳೆದೆರಡು ದಿನಗಳ ಹಿಂದೆ ಪತಿ-ಪತ್ನಿಯ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿತ್ತು. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಾಗ ಗಂಗಾಧರ್ ಮೇಲೆ ಪತ್ನಿ ಕುದಿಯುತ್ತಿದ್ದ ಸಾಂಬಾರ್ ತಂದು ಸುರಿದಿದ್ದಾಳೆ.
ಘಟನೆಯಲ್ಲಿ ಗಂಗಾಧರ್ಗೆ ಮುಖ ಸೇರಿದಂತೆ ದೇಹದ ಕೆಲವು ಭಾಗಗಳು ಸುಟ್ಟು ಹೋಗಿದ್ದು, ಆತನೀಗ ತಿಪಟೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.