ETV Bharat / state

ರಾಜ್ಯದಲ್ಲಿ 9 ದಿನಗಳ ಕಾಲ ರಂದೀಪ್ ಸಿಂಗ್ ಸುರ್ಜೇವಾಲಾ ಪ್ರವಾಸ - Tumkur latest update new

ಕಾಂಗ್ರೆಸ್ ಪಕ್ಷದ ಬಲವರ್ಧನೆ ದೃಷ್ಟಿಯಿಂದ ರಾಜ್ಯದಲ್ಲಿ 9 ದಿನಗಳ ಕಾಲ ಎಲ್ಲಾ ಜಿಲ್ಲೆಗಳ ಮುಖಂಡರೊಂದಿಗೆ ವಿಶೇಷ ಸಭೆ ನಡೆಸಲು ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಜುಲೈ 23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ..

Tumkur
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್
author img

By

Published : Jul 21, 2021, 9:26 PM IST

ತುಮಕೂರು : ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ರಾಜ್ಯದಲ್ಲಿ 9 ದಿನಗಳ ಕಾಲ ಎಲ್ಲಾ ಜಿಲ್ಲೆಗಳ ಮುಖಂಡರೊಂದಿಗೆ ವಿಶೇಷ ಸಭೆ ನಡೆಸಲು ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಜುಲೈ 23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸಲೀಂ ಅಹಮದ್ ತಿಳಿಸಿದರು.

ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 5 ಪ್ರದೇಶಗಳ ಪ್ರವಾಸ ಮಾಡಿ 25 ಜಿಲ್ಲೆಯ ಮುಖಂಡರ ಭೇಟಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಜುಲೈ 22 ಮತ್ತು 23ರಂದು ಮಂಗಳೂರಿನ ಕಾರ್ಯಕ್ರಮ ಮುಗಿಸಿ ಜು.24ರಂದು ತುಮಕೂರಿಗೆ ಆಗಮಿಸಲಿದ್ದಾರೆ. ಜು. 28 ಮತ್ತೆ 29ರಂದು ಹುಬ್ಬಳ್ಳಿ ಹಾಗೂ 30ರಂದು ಮೈಸೂರಿನಲ್ಲಿ ಸಭೆ ನಡೆಸಲಿದ್ದಾರೆ.

ರಾಜ್ಯ ಉಸ್ತುವಾರಿ ಪ್ರವಾಸದ ಕುರಿತಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾಹಿತಿ..

ಜು. 24 ರಂದು ದಾವಣಗೆರೆ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗದ ಸಭೆ ತುಮಕೂರಲ್ಲಿ ನಡೆಯಲಿದೆ ಎಂದು ಸಲೀಂ ಅಹಮದ್ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.