ತುಮಕೂರು: ಜೂನ್ 18ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಸಕಲ ಸಿದ್ಧತೆಯೊಂದಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಲಲಿತಾ ಕುಮಾರಿ ತಿಳಿಸಿದ್ದಾರೆ.
ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 25,050 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 690 ವಿದ್ಯಾರ್ಥಿಗಳು ಹೊರ ಜಿಲ್ಲೆಯಿಂದ ಬರುತ್ತಿದ್ದು, ಐವರು ಹೊರ ರಾಜ್ಯದಿಂದ ಪರೀಕ್ಷೆ ಬರೆಯಲು ಬರುತ್ತಿದ್ದಾರೆ. ಜಿಲ್ಲೆಯಲ್ಲಿ 34 ಪರೀಕ್ಷಾ ಕೇಂದ್ರಗಳಿದ್ದು, ಹೆಚ್ಚುವರಿಯಾಗಿ ಕೊಠಡಿಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಕಂಟೈನ್ಮೆಂಟ್ ಏರಿಯಾದಿಂದ ಪರೀಕ್ಷೆ ಬರೆಯಲು ಬರುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಕೊಠಡಿ ವ್ಯವಸ್ಥೆ ಕೂಡ ಮಾಡಲಾಗಿದೆ. ಪರೀಕ್ಷೆ ಬರೆಯಲು ಬರುವಂತಹ ಪ್ರತೀ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ಪರೀಕ್ಷೆ ಮಾಡಲಾಗುವುದು. ಈಗಾಗಲೇ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದೆ ಎಂದು ವಿವರಿಸಿದರು.