ತುಮಕೂರು: ಜಿಲ್ಲೆಯಲ್ಲಿ 118 ಶಂಕಿತರ ತಪಾಸಣೆಯ ವರದಿ ಬಾಕಿ ಇದೆ. ಒಟ್ಟು 480 ಶಂಕಿತರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ ತಿಳಿಸಿದರು.
![Report of 118 suspects pending in the district](https://etvbharatimages.akamaized.net/etvbharat/prod-images/kn-tmk-07-covidreport-script-7202233_18042020201449_1804f_1587221089_504.jpg)
24 ಶಂಕಿತರು ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರು ಮನೆಯಿಂದ ಹೊರಗಡೆ ಬರದಂತೆ ಸೂಚಿಸಲಾಗಿದೆ. 307 ಮಂದಿಯನ್ನು ಐಸೋಲೇಷನ್ನಲ್ಲಿ ಇಡಲಾಗಿದೆ. ಈಗಾಗಲೇ 346 ಶಂಕಿತರ 28 ದಿನಗಳ ಹೋಂ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ. ಇಲ್ಲಿಯವರೆಗೆ 687 ಶಂಕಿತರ ಗಂಟಲು ದ್ರವ ಮಾದರಿ ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 562 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ ಎಂದು ತಿಳಿಸಿದರು.
2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗಿದ್ದಾರೆ ಎಂದು ಸ್ಪಷ್ಟಪಡಿಸಿದರು.