ತುಮಕೂರು: ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಎಸಿಬಿ ರದ್ದುಮಾಡಿ, ರಾಜ್ಯದಲ್ಲಿ ಲೋಕಾಯುಕ್ತ ಬಲ ಗೊಳಿಸುವುದಾಗಿ ಬಿ.ಎಸ್. ಯಡಿಯೂರಪ್ಪ ಮಾತು ಕೊಟ್ಟಿದ್ದರು, ಅದನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ನೀಡುವಂತೆ ಮನವಿ ಸಲ್ಲಿಸಲಾಯಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ ಮಾತನಾಡಿ, ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಬಲಯುತವಾಗಿದ್ದು, ಅದನ್ನು ಬಲಹೀನಗೊಳಿಸಲಾಗಿದೆ ಎಂದು ಆರೋಪಿಸಿದರು.
ಲೋಕಾಯುಕ್ತ ಬದಲಿಗೆ ಎಸಿಬಿ ಸಂಸ್ಥೆಯನ್ನು ಸರ್ಕಾರ ಜಾರಿಗೊಳಿಸಿದೆ. ಸಾಕಷ್ಟು ಪ್ರಕರಣಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಎಸಿಬಿ ಅಧಿಕಾರಿಗಳು ಹೇಳಿ ತಿರಸ್ಕಾರಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ನ್ಯಾಯ ಸಿಗಲು ತೊಂದರೆಯಾಗುತ್ತಿದೆ. ಆದ್ದರಿಂದ ಯಡಿಯೂರಪ್ಪನವರು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಲೋಕಾಯುಕ್ತ ಸಂಸ್ಥೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.