ETV Bharat / state

ಮದ್ಯದಂಗಡಿ ತೆರೆಯದಂತೆ ಸ್ತ್ರೀ ಶಕ್ತಿ ಸಂಘದಿಂದ ಅಪರ ಜಿಲ್ಲಾಧಿಕಾರಿಗೆ ಮನವಿ - ತುಮಕೂರು ಸ್ತ್ರೀ ಶಕ್ತಿ ಸಂಘದಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸುದ್ದಿ

ಹೊಸದಾಗಿ ತೆರೆದಿರುವ ಎಂಎಸ್ಐಎಲ್ ಮದ್ಯದ ಮಳಿಗೆ ಬಳಿ ಹಾಲಿನ ಡೈರಿ, ದೇವಸ್ಥಾನ, ಕೃಷಿ ಭೂಮಿಯಿದ್ದು ಮಳಿಗೆಯಿಂದ ರೈತರು, ಮಹಿಳೆಯರು ಹಾಗೂ ಮಕ್ಕಳಿಗೆ ತೊಂದರೆಯಾಗಲಿದೆ. ಹಾಗಾಗಿ, ಮಳಿಗೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸ್ತ್ರೀ ಶಕ್ತಿ ಸಂಘದ ಸದಸ್ಯರು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿದರು.

ಸ್ತ್ರೀ ಶಕ್ತಿ ಸಂಘದಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ

author img

By

Published : Jun 11, 2020, 3:13 PM IST

ತುಮಕೂರು: ನಗರದ 23ನೇ ವಾರ್ಡ್‌ಗೆ ಸೇರುವ ಸತ್ಯಮಂಗಲದ ಬಳಿ ವಡ್ಡರಹಳ್ಳಿ ಎಂಬ ಪ್ರದೇಶದಲ್ಲಿ ಹೊಸದಾಗಿ ಎಂಎಸ್ಐಎಲ್ ವತಿಯಿಂದ ಮದ್ಯ ಮಾರಾಟ ಮಳಿಗೆ ಪ್ರಾರಂಭಿಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಇವತ್ತು ವಡ್ಡರಹಳ್ಳಿ ಗ್ರಾಮದ ಮಹಿಳೆಯರು ಅಪರ ಜಿಲ್ಲಾಧಿಕಾರಿಗೆ ಮಳಿಗೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಮನವಿ ನೀಡಿದರು.

ಸ್ತ್ರೀ ಶಕ್ತಿ ಸಂಘದಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ

ಹೊಸದಾಗಿ ತೆರೆದಿರುವ ಎಂಎಸ್ಐಎಲ್ ಮದ್ಯದ ಮಳಿಗೆ ಬಳಿ ಹಾಲಿನ ಡೈರಿ, ದೇವಸ್ಥಾನ, ಕೃಷಿ ಭೂಮಿಯಿದ್ದು, ಮಳಿಗೆಯಿಂದ ರೈತರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ತೊಂದರೆಯಾಗಲಿದೆ. ಹಾಗಾಗಿ ಮಳಿಗೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಗ್ರಾ.ಪಂ ಸದಸ್ಯೆ ನಾಗರತ್ನಮ್ಮ, ಈ ಮಳಿಗೆಯನ್ನು ತಕ್ಷಣ ತೆರವುಗೊಳಿಸುವಂತೆ ಒತ್ತಾಯಿಸಿ ಈಗಾಗಲೇ ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದ್ರೆ, ಯಾವುದೇ ರೀತಿಯ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇಂದು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಯಾವುದೇ ಕಾರಣಕ್ಕೂ ಎಂಎಸ್ಐಎಲ್ ಮಳಿಗೆ ತೆರೆಯಲು ಬಿಡುವುದಿಲ್ಲ. ಒಂದು ವೇಳೆ ಮಳೆಗೆ ತೆರೆದರೆ, ಮಳಿಗೆಗೆ ಬೆಂಕಿ ಹಚ್ಚಲಾಗುವುದು ಎಂದು ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.