ETV Bharat / state

ಶಾಸಕ ಶ್ರೀನಿವಾಸ್​ ಉಚ್ಚಾಟನೆಗೆ ಬೇಸರ.. ಜೆಡಿಎಸ್​ ಕಾರ್ಯಕರ್ತರಿಂದ ಸಾಮೂಹಿಕ ರಾಜೀನಾಮೆ - ಈಟಿವಿ ಭಾರತ್​ ಕರ್ನಾಟಕ

ಶಾಸಕ ಗುಬ್ಬಿ ಶ್ರೀನಿವಾಸ್ ಅವರು ಕುಮಾರಸ್ವಾಮಿ ಅವರ ಮೇಲೆ ಏಕ ವಚನದಲ್ಲಿ ಆರೋಪ ಮಾಡಿದ ನಂತರ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಶ್ರೀನಿವಾಸ್ ಬೆಂಬಲಿಗರು ಮತ್ತು ಜೆಡಿಎಸ್​ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

resignation-of-jds-activist-in-tumkur
ಜೆಡಿಎಸ್​ ತೊರೆದ ನೂರಾರು ಕಾರ್ಯುಕರ್ತರು
author img

By

Published : Sep 25, 2022, 3:33 PM IST

ತುಮಕೂರು : ಜಿಲ್ಲೆಯ ಗುಬ್ಬಿ ವಿಧಾನ ಸಭಾ ಕ್ಷೇತ್ರದಲ್ಲಿ ನೂರಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ನಾಯಕರ ವಿರುದ್ಧ ಏಕವಚನದಲ್ಲಿ ನಿಂದಿಸಿದ್ದಕ್ಕೆ ಶಾಸಕ ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಶ್ರೀನಿವಾಸ್ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಹೆಚ್ಚು ಮುಂದೆ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. ಮಹಿಳಾ ಕಾರ್ಯಕರ್ತೆಯರೂ ಸಾಲಾಗಿ ನಿಂತು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಸ್ಥಳೀಯ ಜೆಡಿಎಸ್ ಪಕ್ಷದ ಕೆಲ ಪದಾಧಿಕಾರಿಗಳು ಈ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಸ್ವೀಕರಿಸಿದರು.

ಇದನ್ನೂ ಓದಿ : ಜೆಡಿಎಸ್​ನಿಂದ ಉಚ್ಚಾಟನೆ ಮಾಡಿರೋದು ನನಗೆ ಸಂತಸ ತಂದಿದೆ: ಗುಬ್ಬಿ ಶಾಸಕ ಶ್ರೀನಿವಾಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.