ETV Bharat / state

ತುಮಕೂರು: ಕಂದಾಯ ಸಚಿವರಿಂದ ಬೆಳೆ ಹಾನಿ ವೀಕ್ಷಣೆ, ಹೆಚ್ಚು ಪರಿಹಾರದ ಭರವಸೆ

ಅಕಾಲಿಕ ಮಳೆಯಿಂದಾಗಿ ತುಮಕೂರು ಜಿಲ್ಲೆಯಾದ್ಯಂತ 1.27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಮತ್ತು ತೋಟಗಾರಿಕೆ ಬೆಳೆಗೆ ಹಾನಿಯಾಗಿದ್ದು, ಕಂದಾಯ ಸಚಿವರು ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

minister r ashok inspects damaged crops in tumkur
ಬೆಳೆ ಹಾನಿ ವೀಕ್ಷಣೆ
author img

By

Published : Nov 25, 2021, 3:39 PM IST

ತುಮಕೂರು: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸುರಿದ ಅಕಾಲಿಕ ಮಳೆಗೆ ಬೆಳೆ ಹಾನಿಯಾದ ಪ್ರದೇಶಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಕುಣಿಗಲ್ ತಾಲೂಕಿನ ಜಲದಿಗೆರೆ ಹಾಗೂ ಬ್ಯಾಲದಕೆರೆ ಗ್ರಾಮಗಳಲ್ಲಿ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಹಾನಿಯಾದ ಬೆಳೆಯನ್ನು ಸಚಿವರು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲೇ ಇದ್ದ ರೈತರು ವರ್ಷವಿಡೀ ಬೆಳೆದ ಬೆಳೆ ಹಾಳಾಗಿದೆ. ಹಾಕಿದ ಶ್ರಮ ಮಣ್ಣು ಪಾಲಾಗಿದೆ. ಹೀಗಾಗಿ ಹೆಚ್ಚು ಪರಿಹಾರ ನೀಡುವಂತೆ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಹೆಚ್ಚು ಪರಿಹಾರ ನೀಡುವ ಬಗ್ಗೆ ಸರ್ಕಾರದ ಜೊತೆಗೆ ಚರ್ಚಿಸಿ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ಕಳೆದ ವಾರದಿಂದ ಸತತವಾಗಿ ಸುರಿದ ಮಳೆಯಿಂದ ಹಾನಿಗೊಳಗಾಗಿರುವ ಬೆಳೆ, ಮನೆಗಳ ವರದಿ ನೀಡುವಂತೆ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು. ಸಂಪೂರ್ಣವಾಗಿ ಹಾನಿ ವರದಿ ಬಂದ ತಕ್ಷಣವೇ ಪರಿಹಾರ ನೀಡಲು ಕ್ರಮವಹಿಸಲಾಗುವುದು. ಪರಿಹಾರವನ್ನು ಹಾನಿಗೊಳಗಾದವರ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಎಂದರು.

ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 679 ಕೋಟಿ ರೂ. ಹಣವಿದ್ದು, ಮಳೆಯಿಂದ ಹಾನಿಗೊಳಗಾದವರಿಗೆ ತಕ್ಷಣವೇ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಎಂದರು. ಹಾನಿಗೆ ಸಂಬಂಧಿಸಿದಂತೆ ಮೊದಲ ಮತ್ತು ಎರಡನೇ ಹಂತ ಸೇರಿ 750 ಕೋಟಿ ರೂ. ಪರಿಹಾರವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೂ ಪರಿಹಾರ ಶೀಘ್ರ ನೀಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಪ್ರಮಾಣದಲ್ಲಿ ಅಂದರೆ ವಾಡಿಕೆಗಿಂತಲೂ ಮಿತಿಮೀರಿ ಮಳೆಯಾಗಿದೆ. ಇದರಿಂದ ಜಿಲ್ಲೆಯಾದ್ಯಂತ 1.27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಮತ್ತು ತೋಟಗಾರಿಕೆ ಬೆಳೆಗೆ ಹಾನಿಯಾಗಿದ್ದು, ಸುಮಾರು 700 ಕೋಟಿ ರೂ.ಗಳ ನಷ್ಟ ಉಂಟಾಗಿದೆ ಎಂದರು.

ಪ್ರಾಥಮಿಕ ಸಮೀಕ್ಷೆ ಪ್ರಕಾರ, ಮುಖ್ಯವಾಗಿ ಮಳೆಯಿಂದ 1.11 ಲಕ್ಷ ಹೆಕ್ಟೇರ್‌ನಷ್ಟು ರಾಗಿ ಬೆಳೆ ಹಾನಿಯಾಗಿದೆ. ಅಲ್ಲದೇ 9 ರಿಂದ10 ಸಾವಿರ ಹೆಕ್ಟೇರ್​ ಮೆಕ್ಕೆಜೋಳದ ಬೆಳೆಯೂ ಹಾನಿಯಾನಿದೆ. ಅದೇ ರೀತಿ 1100 ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಗೊಳಗಾಗಿದೆ ಎಂದರು.

ಇನ್ನು ಬೆಳೆ ಹಾನಿ ಹೊರತುಪಡಿಸಿ ರಸ್ತೆ, ಟ್ಯಾಂಕ್, ವಿದ್ಯುತ್ ಕಂಬ, ಟಿ.ಸಿ., ಸಣ್ಣ ನೀರಾವರಿ ಕೆರೆಗಳ ಹಾನಿ ಸೇರಿದಂತೆ ಒಟ್ಟು 80ಕೋಟಿ ರೂ.ನಷ್ಟು ನಷ್ಟ ಉಂಟಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಸುಮಾರು 800ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಮಾಹಿತಿ ನೀಡಿದರು.

622 ಮನೆಗಳಿಗೆ ಹಾನಿ:

ಪ್ರಸ್ತುತ ವರದಿ ಪ್ರಕಾರ, ಸುಮಾರು 622 ಮನೆಗಳು ಹಾನಿಗೊಳಗಾಗಿದ್ದು, ಸುಮಾರು 8 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ, 614 ಭಾಗಶಃ ಬಿದ್ದಿವೆ. ಇನ್ನು ಕುಣಿಗಲ್​​ನಲ್ಲಿ ಓರ್ವ ಮೃತಪಟ್ಟಿದ್ದು, ಮೃತನ ಕುಟುಂಬಕ್ಕೆ ನಿಯಮಾನುಸಾರ 5ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ ಎಂದರು.

ಸರ್ಕಾರದ ನಿರ್ದೇಶನದ ಪ್ರಕಾರ ಸಮೀಕ್ಷೆ ನಡೆಸಲಾಗುತ್ತಿದ್ದು, ಬೆಳೆ ಮತ್ತು ಮನೆ ಹಾನಿಗಳಿಗೆ ಪರಿಹಾರ ಕಲ್ಪಿಸಲು ಪೋರ್ಟ್​​ಲ್​ನಲ್ಲಿ ನೋಂದಣಿ ಮಾಡಲಾಗುತ್ತಿದೆ. ಹಾನಿಗೊಳಗಾದ ಯಾವುದೇ ಅರ್ಹ ಫಲಾನುಭವಿಗೆ ಪರಿಹಾರ ಕೈತಪ್ಪದಂತೆ ಕ್ರಮ ವಹಿಸಲಾಗಿದೆ. ಪರಿಹಾರವು ಅನರ್ಹರ ಪಾಲಾಗಬಾರದು ಎಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಸಮೀಕ್ಷೆಯನ್ನು ಹತ್ತು ದಿನಗಳಲ್ಲಿ ಮುಗಿಸಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.