ತುಮಕೂರು: ಮಂಗಳವಾರ ಜಿಲ್ಲೆಯ 255 ಜನರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದ್ದು, 38 ಜನರ ವರದಿಯನ್ನು ತಿರಸ್ಕರಿಸಿ ಪುನಃ ಪರೀಕ್ಷೆಗೆ ಕಳುಹಿಸಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 1,963 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಒಟ್ಟು 74 ಮಂದಿ ಶಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ. ಇದುವರೆಗೆ ಒಟ್ಟು 7,575 ಜನರ ಸ್ಯಾಂಪಲ್ಸ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 6,789 ಜನರ ವರದಿ ನೆಗೆಟಿವ್ ಬಂದಿದೆ. 737 ಮಂದಿಯ ವರದಿ ಬರಲು ಬಾಕಿಯಿದೆ.
ಇದುವರೆಗೆ ಜಿಲ್ಲೆಯಲ್ಲಿ 11 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಐವರು ಗುಣಮುಖರಾಗಿದ್ದಾರೆ. ನಾಲ್ಕು ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಇಬ್ಬರು ಮೃತಪಟ್ಟಿದ್ದಾರೆ.