ETV Bharat / state

ಶಾಲಾ ಮಕ್ಕಳಿಗೆ ಆತ್ಮ ರಕ್ಷಣೆಗೆ ಬಗ್ಗೆ ತಿಳಿಸಿದ ಕಲ್ಪತರು ಪಡೆ

ತುಮಕೂರಿನಲ್ಲಿ ಕಲ್ಪತರು ಪಡೆ ನಗರದಲ್ಲಿ ಹೆಣ್ಣುಮಕ್ಕಳಿಗೆ ಪೋಲಿ ಪುಂಡರಿಂದ ಏನು ಸಮಸ್ಯೆ ಆಗದಂತೆ ಕಟ್ಟೆಚ್ಚರ ವಹಿಸುತ್ತಿದೆ. ಅದೇ ರೀತಿ ಶಾಲಾ-ಕಾಲೇಜು, ಗಾರ್ಮೆಂಟ್ಸ್, ಬಸ್ ಸ್ಟ್ಯಾಂಡ್ ಮುಂತಾದ ಸಾರ್ವಜನಿಕ ಪ್ರದೇಶಗಳಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ.

author img

By

Published : Jan 27, 2020, 8:05 PM IST

kalpataru police team
ಕಲ್ಪತರು ಪಡೆ

ತುಮಕೂರು: ತುಮಕೂರಿನಲ್ಲಿ ಪೊಲೀಸ್ ಇಲಾಖೆಯಿಂದ ಸ್ಥಾಪಿತಗೊಂಡಿರುವ ಕಲ್ಪತರು ಪಡೆ ಪ್ರತಿದಿನ ಜಿಲ್ಲೆಯಲ್ಲಿ ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದರ ಬಗ್ಗೆ ಶಾಲೆಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ನೀಡಲಾಯಿತು.

ಕಲ್ಪತರು ಪಡೆ

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ಮಹಿಳಾ ಪೊಲೀಸರಿಂದ ಕೂಡಿರುವ ಕಲ್ಪತರು ಪಡೆ ಎಂಬ ನೂತನ ತಂಡವನ್ನು ರಚಿಸಿ, ಆ ತಂಡದ ಎಲ್ಲಾ ಸದಸ್ಯರಿಗೂ ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಹಾಗೂ ಇತರರನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದರ ಬಗ್ಗೆ ತರಬೇತಿ ನೀಡಿ, ನಗರ ಹಾಗೂ ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.

ಕಲ್ಪತರು ಪಡೆ ನಗರದಲ್ಲಿ ಹೆಣ್ಣುಮಕ್ಕಳಿಗೆ ಪೋಲಿ ಪುಂಡರಿಂದ ಏನು ಸಮಸ್ಯೆ ಆಗದಂತೆ ಕಟ್ಟೆಚ್ಚರ ವಹಿಸುತ್ತಿದೆ. ಅದೇ ರೀತಿ ಶಾಲಾ-ಕಾಲೇಜು, ಗಾರ್ಮೆಂಟ್ಸ್, ಬಸ್ ಸ್ಟ್ಯಾಂಡ್ ಮುಂತಾದ ಸಾರ್ವಜನಿಕ ಪ್ರದೇಶಗಳಲ್ಲಿ ಈ ಕಲ್ಪತರು ಪಡೆ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಅಪರಾಧಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಲಿದೆ.

ಇಂದು ನಗರದ ಎಂಪ್ರೆಸ್ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ತೊಂದರೆಗೆ ಒಳಗಾದಾಗ ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದರ ಬಗ್ಗೆ ಕೆಲವೊಂದು ವಿಧಾನಗಳನ್ನು ತಿಳಿಸಿಕೊಡಲಾಯಿತು. ಜೊತೆಗೆ ಅಮಾನಿಕೆರೆ ಪಾರ್ಕ್​ನಲ್ಲಿ ಅಲ್ಲಿನ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆಯ ಮೂಲಕ ಕಲ್ಪತರು ಪಡೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಬಗ್ಗೆ ತಿಳಿಸಲಾಯಿತು.

ಕಲ್ಪತರು ಪಡೆಯಲ್ಲಿ ಪೊಲೀಸ್ ಇಲಾಖೆಯ 69 ಮಹಿಳಾ ಪೇದೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇವರಿಗೆ 25 ದಿನಗಳ ಕಾಲ ತರಬೇತಿ ನೀಡಲಾಗಿದ್ದು, ಈ ತರಬೇತಿಯಲ್ಲಿ ಯೋಗ, ಕರಾಟೆ ಹಾಗೂ ಮಹಿಳಾ ಮತ್ತು ಮಕ್ಕಳ ಬಗ್ಗೆ ಇರುವಂತಹ ಕಾನೂನು ವಿಷಯಗಳ ಮಾಹಿತಿ ಕಾನೂನು ತಜ್ಞರಿಂದ ನೀಡಲಾಗಿದೆ. ಈ ಪಡೆ ಸಾರ್ವಜನಿಕ ಪ್ರದೇಶಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯವನ್ನು ಮಾಡಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿ ಕೃಷ್ಣ ತಿಳಿಸಿದರು.

Intro:ತುಮಕೂರು: ತುಮಕೂರಿನಲ್ಲಿ ಪೊಲೀಸ್ ಇಲಾಖೆಯಿಂದ ಸ್ಥಾಪಿತಗೊಂಡಿರುವ ಕಲ್ಪತರು ಪಡೆ ಪ್ರತಿದಿನ ಜಿಲ್ಲೆಯಲ್ಲಿ ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದರ ಬಗ್ಗೆ ಶಾಲೆಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ನೀಡಲಾಯಿತು.

Body:ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ಮಹಿಳಾ ಪೊಲೀಸರಿಂದ ಕೂಡಿರುವ ಕಲ್ಪತರು ಪಡೆ ಎಂಬ ನೂತನ ತಂಡವನ್ನು ರಚಿಸಿ, ಆ ತಂಡದ ಎಲ್ಲಾ ಸದಸ್ಯರಿಗೂ ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಹಾಗೂ ಇತರರನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದರ ಬಗ್ಗೆ ತರಬೇತಿ ನೀಡಿ, ನಗರ ಹಾಗೂ ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳನ್ನು ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ.

ಕಲ್ಪತರು ಪಡೆ ನಗರದಲ್ಲಿ ಹೆಣ್ಣುಮಕ್ಕಳಿಗೆ ಪೋಲಿ ಪುಂಡರಿಂದ ಏನು ಸಮಸ್ಯೆ ಆಗದಂತೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಅದೇ ರೀತಿ ಶಾಲಾ-ಕಾಲೇಜು, ಗಾರ್ಮೆಂಟ್ಸ್, ಬಸ್ ಸ್ಟ್ಯಾಂಡ್ ಮುಂತಾದ ಸಾರ್ವಜನಿಕ ಪ್ರದೇಶಗಳಲ್ಲಿ ಈ ಕಲ್ಪತರು ಪಡೆ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಅಪರಾಧಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಈ ಪಡೆ ಮಾಡಲಿದೆ.

ಅದೇ ರೀತಿ ಇಂದು ನಗರದ ಎಂಪ್ರೆಸ್ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ತೊಂದರೆಗೆ ಒಳಗಾದಾಗ ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದರ ಬಗ್ಗೆ ಕೆಲವೊಂದು ವಿಧಾನಗಳನ್ನು ತಿಳಿಸಿಕೊಡಲಾಯಿತು. ಜೊತೆಗೆ ಅಮಾನಿಕೆರೆ ಪಾರ್ಕ್ ನಲ್ಲಿ ಅಲ್ಲಿನ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆಯ ಮೂಲಕ ಕಲ್ಪತರು ಪಡೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಬಗ್ಗೆ ತಿಳಿಸಲಾಯಿತು.

ಕಲ್ಪತರು ಪಡೆಯಲ್ಲಿ 69 ಪೊಲೀಸ್ ಇಲಾಖೆಯ ಮಹಿಳಾ ಪೇದೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇವರಿಗೆ 25 ದಿನಗಳ ಕಾಲ ತರಬೇತಿ ನೀಡಲಾಗಿದ್ದು, ಈ ತರಬೇತಿಯಲ್ಲಿ ಯೋಗ, ಕರಾಟೆ ಹಾಗೂ ಮಹಿಳಾ ಮತ್ತು ಮಕ್ಕಳ ಬಗ್ಗೆ ಇರುವಂತಹ ಕಾನೂನು ವಿಷಯಗಳ ಮಾಹಿತಿ ಕಾನೂನು ತಜ್ಞರಿಂದ ನೀಡಿ ನೀಡಲಾಗಿದೆ. ಈ ಪಡೆ ಸಾರ್ವಜನಿಕ ಪ್ರದೇಶಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯವನ್ನು ಮಾಡಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿ ಕೃಷ್ಣ ತಿಳಿಸಿದರು.
ಬೈಟ್: ಕೋನ ವಂಶಿ ಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.

Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.