ETV Bharat / state

ತುಮಕೂರು: ವಿದ್ಯುತ್ ತಂತಿ ತಗುಲಿ 7 ಕುರಿಗಳು ದಾರುಣ ಸಾವು

author img

By

Published : Jan 16, 2021, 5:37 PM IST

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಲಕ್ಕೇನಹಳ್ಳಿ ಗ್ರಾಮದಲ್ಲಿ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ವೈರ್​ ಸ್ಪರ್ಶಿಸಿ ಏಳು ಕುರಿಗಳು ದಾರುಣವಾಗಿ ಮೃತಪಟ್ಟಿವೆ.

sheeps dies by electrical shock
ಕುರಿಗಳು ಸಾವು

ತುಮಕೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಏಳು ಕುರಿಗಳು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಲಕ್ಕೇನಹಳ್ಳಿಯಲ್ಲಿ ನಡೆದಿದೆ.

ಘಟನೆಯಲ್ಲಿ ಇನ್ನೂ ಎಂಟು ಕುರಿಗಳು ತೀವ್ರ ಅಸ್ವಸ್ಥವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದ ಸಮೀಪ ಇರುವ ಕೆರೆಯಲ್ಲಿ ನೀರು ಕುಡಿಯಲು ಕುರಿಗಳನ್ನು ಕರೆದುಕೊಂಡು ಹೋಗಲಾಗುತ್ತಿತ್ತು. ಈ ಸಂದರ್ಭ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಏಳು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.

ಹಿಂದೆ ಹಲವು ಬಾರಿ ವಿದ್ಯುತ್ ತಂತಿಯನ್ನು ಬದಲಾಯಿಸುವಂತೆ ಗ್ರಾಮಸ್ಥರು ಬೆಸ್ಕಾಂ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಈ ದುರ್ಘಟನೆಗೆ ಬೆಸ್ಕಾಮ್ ಇಲಾಖೆ ಅಧಿಕಾರಿಗಳೇ ನೇರ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.