ETV Bharat / state

ಶಿರಾ ಉಪ ಕದನ.. ಜೆಡಿಎಸ್ ಮುಖಂಡ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆ - JDS leader Kalkeri Ravikumar joins Congress

ಜೆಡಿಎಸ್ ಮುಖಂಡರು ಬೇರೆ ಪಕ್ಷಗಳತ್ತ ಮುಖ ಮಾಡುತ್ತಿರುವುದಕ್ಕೆ ಕಾರಣ ಎನ್ನಲಾಗ್ತಿದೆ. ಹೀಗೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕೆಲ ಪ್ರಭಾವಿ ಮುಖಂಡರು ಕಾಂಗ್ರೆಸ್ ಪಕ್ಷದತ್ತ ವಲಸೆ ಹೋಗುತ್ತಿರುವುದು ಜೆಡಿಎಸ್ ಪಕ್ಷದ ಮುಖಂಡರಲ್ಲಿ ತಳಮಳ ಸೃಷ್ಟಿಸಿದೆ..

ಜೆಡಿಎಸ್ ಮುಖಂಡ ಕಲ್ಕೆರಿ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆ

author img

By

Published : Oct 4, 2020, 4:23 PM IST

Updated : Oct 4, 2020, 5:31 PM IST

ತುಮಕೂರು : ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವುದು ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನೆಡೆಯಾಗಿದೆ. ಅನೇಕ ವರ್ಷಗಳಿಂದ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಕಲ್ಕೆರೆ ರವಿಕುಮಾರ್ ದಿಢೀರನೆ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ.

ರವಿಕುಮಾರ್ ಪತ್ನಿ ತಾವರೇಕೆರೆ ಜಿಲ್ಲಾ ಪಂಚಾಯತ್‌ ಜೆಡಿಎಸ್ ಸದಸ್ಯೆ ಆಗಿದ್ದಾರೆ. ಅಲ್ಲದೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆಯಾಗಿ ಕೂಡ ಅಧಿಕಾರ ನಡೆಸುತ್ತಿದ್ದಾರೆ. ಇತ್ತೀಚಿಗೆ ಶಿರಾ ಪಟ್ಟಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿಯೂ ಕೂಡ ಭಾಗವಹಿಸಿದ್ದ ಕಲ್ಕೆರೆ ರವಿಕುಮಾರ್, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಸಂಪೂರ್ಣ ಬೆಂಬಲ ನೀಡಿ ಕೆಲಸ ಮಾಡುತ್ತೇನೆ ಎಂದು ವೇದಿಕೆಯಲ್ಲಿ ಘೋಷಿಸಿದ್ದರು.

ಜೆಡಿಎಸ್ ಮುಖಂಡ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆ

ಅಲ್ಲದೆ ತಾವು ಕೂಡ ಟಿಕೆಟ್ ಆಕಾಂಕ್ಷಿ ಎಂಬುದಾಗಿ ಜೆಡಿಎಸ್ ಮುಖಂಡರ ಗಮನಕ್ಕೆ ತಂದಿದ್ದರು. ಆದರೆ, ಇದ್ದಕ್ಕಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್ ಪಕ್ಷ ಸೇರಿರುವುದು ಕ್ಷೇತ್ರದಲ್ಲಿ ಜೆಡಿಎಸ್​​ಗೆ ಸಾಕಷ್ಟು ಹಿನ್ನೆಡೆ ಅನುಭವಿಸುವಂತಾಗಿದೆ. ದಿ.ಸತ್ಯನಾರಾಯಣ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲು ಈಗಾಗಲೇ ಜೆಡಿಎಸ್ ಮುಖಂಡರು ಸಿದ್ಧತೆ ನಡೆಸಿದ್ದಾರೆ.

ಹಾಗಾಗಿ, ಜೆಡಿಎಸ್ ಮುಖಂಡರು ಬೇರೆ ಪಕ್ಷಗಳತ್ತ ಮುಖ ಮಾಡುತ್ತಿರುವುದಕ್ಕೆ ಕಾರಣ ಎನ್ನಲಾಗ್ತಿದೆ. ಹೀಗೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕೆಲ ಪ್ರಭಾವಿ ಮುಖಂಡರು ಕಾಂಗ್ರೆಸ್ ಪಕ್ಷದತ್ತ ವಲಸೆ ಹೋಗುತ್ತಿರುವುದು ಜೆಡಿಎಸ್ ಪಕ್ಷದ ಮುಖಂಡರಲ್ಲಿ ತಳಮಳ ಸೃಷ್ಟಿಸಿದೆ. ಸತ್ಯನಾರಾಯಣ ಅವರ ಕುಟುಂಬದವರು ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದ್ರೆ ಹೊರಗಡೆಯಿಂದ ಅಭ್ಯರ್ಥಿ ಕರೆತಂದು ಕಣಕ್ಕಿಳಿಸುವ ಲೆಕ್ಕಾಚಾರ ಜೆಡಿಎಸ್ ಪಕ್ಷದಲ್ಲಿದೆ.

Last Updated : Oct 4, 2020, 5:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.