ETV Bharat / state

ಶಿರಾ ಬೈ ಎಲೆಕ್ಷನ್: ಜೆಡಿಎಸ್ ಅಭ್ಯರ್ಥಿ ಪರವಾಗಿ ನಾಳೆ ಪಕ್ಷದ ಮುಖಂಡರಿಂದ ನಾಮಿನೇಷನ್

author img

By

Published : Oct 13, 2020, 4:59 PM IST

Updated : Oct 13, 2020, 5:34 PM IST

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಳೆ (ಅಕ್ಟೋಬರ್ 14) ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

shira jds candidate ammajamma
ಶಿರಾ ಜೆಡಿಎಸ್ ಅಭ್ಯರ್ಥಿ ಅಮ್ಮಜಮ್ಮ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ 14 ರಂದು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಪಕ್ಷದ ಮುಖಂಡರು ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಕೊರೋನಾ ಸೋಂಕಿಗೆ ಒಳಗಾಗಿರುವ ಅಮ್ಮಾಜಮ್ಮ ಅವರು ಚಿಕಿತ್ಸೆ ಪಡೆದಿದ್ದು, ಇನ್ನೂ ಐದು ದಿವಸಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಕಾನೂನು ಪ್ರಕಾರವೇ ಅವರ ಪರವಾಗಿ ಜೆಡಿಎಸ್ ಮುಖಂಡರು 2 ಸೆಟ್ ನಾಮಪತ್ರಗಳನ್ನು ಚುನಾವಣಾಧಿಕಾರಿಗೆ ಸಲ್ಲಿಸಲಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್. ಡಿ. ರೇವಣ್ಣ, ಸಂಸದ ಪ್ರಜ್ವಲ್, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ , ಶಾಸಕ ಗೌರಿ ಶಂಕರ್ ಹಾಜರಿರಲಿದ್ದಾರೆ. ಅಲ್ಲದೆ, ಪ್ರತಿ 1 ಸೆಟ್ ನಾಮಪತ್ರ ಸಲ್ಲಿಸುವ ವೇಳೆ ಮೂವರು ಜೆಡಿಎಸ್ ಮುಖಂಡರು ಚುನಾವಣಾಧಿಕಾರಿ ಬಳಿ ತೆರಳಲಿದ್ದಾರೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Last Updated : Oct 13, 2020, 5:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.