ETV Bharat / state

ಶಿರಾ ಕ್ಷೇತ್ರದ ಜನತೆ ಹಣಕ್ಕೆ ಬಲಿಯಾಗಲ್ಲ, ಶ್ರಮಕ್ಕೆ ಬೆಲೆ ಕೊಡ್ತಾರೆ: ಹೆಚ್​​​ಡಿಕೆ - tumkur latest news

ಪ್ರತಿ ಹಳ್ಳಿಗೂ ತೆರಳಿ ನಾನು ಮತ್ತು ಮಾಜಿ ಪ್ರಧಾನಿ ದೇವೇಗೌಡರು ಪ್ರಚಾರ ನಡೆಸುತ್ತೇವೆ. ಕ್ಷೇತ್ರದ ಮತದಾರರ ವಿಶ್ವಾಸ ಗಳಿಸಲು ಇಂದಿನಿಂದ ಅಧಿಕೃತವಾಗಿ ನಾವು ಪ್ರಚಾರಕ್ಕೆ ಚಾಲನೆ ನೀಡಿದ್ದೇವೆ..

hd kumaraswamy
ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ
author img

By

Published : Oct 21, 2020, 3:40 PM IST

ತುಮಕೂರು: ಎರಡು ರಾಷ್ಟ್ರೀಯ ಪಕ್ಷಗಳು ಎಷ್ಟೇ ಹಣದ ಹೊಳೆ ಹರಿಸಿದರೂ ಕೂಡ ಶಿರಾ ಕ್ಷೇತ್ರದ ಜನತೆ ಹಣಕ್ಕೆ ಬಲಿಯಾಗುವವರಲ್ಲ, ಶ್ರಮಕ್ಕೆ ಬೆಲೆ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​​ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದ ದೊಡ್ಡ ಆಲದಮರ ಗ್ರಾಮದಲ್ಲಿ ಪಕ್ಷದ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಸತ್ಯನಾರಾಯಣ ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಕೈಯಿಂದ ಹಣ ಖರ್ಚು ಮಾಡಿ ಚುನಾವಣೆ ಮಾಡಿದ್ದಾರೆ ಎಂದು ತಿಳಿಸಿದರು. ಈ ಬಾರಿ ಪಾಪದ ಹಣದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಕ್ಷೇತ್ರದ ಜನತೆ ಸಾಬೀತು ಪಡಿಸಲಿದ್ದಾರೆ ಎಂದರು.

ಶಿರಾ ಕ್ಷೇತ್ರದ ಜನತೆ ಕುರಿತು ಹೆಚ್​​​ಡಿಕೆ ಅಭಿಪ್ರಾಯ

ಶಿರಾ ವಿಧಾನಸಭಾ ಕ್ಷೇತ್ರದ ಪ್ರತಿ ಹಳ್ಳಿಗೂ ತೆರಳಿ ನಾನು ಮತ್ತು ಮಾಜಿ ಪ್ರಧಾನಿ ದೇವೇಗೌಡರು ಪ್ರಚಾರ ನಡೆಸುತ್ತೇವೆ. ಕ್ಷೇತ್ರದ ಮತದಾರರ ವಿಶ್ವಾಸ ಗಳಿಸಲು ಇಂದಿನಿಂದ ಅಧಿಕೃತವಾಗಿ ನಾವು ಪ್ರಚಾರಕ್ಕೆ ಚಾಲನೆ ನೀಡಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಅಬ್ಬರದ ಪ್ರಚಾರದ ನಡುವೆ ನಾವು ಸಕ್ರಿಯವಾಗಿ ಪಕ್ಷದ ಪರವಾಗಿ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇವೆ. ಒಂದು ವಾರ ಕಾಲ ಶಿರಾ ಕ್ಷೇತ್ರದಲ್ಲಿದ್ದು ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.