ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಹಾವಳಿಗೆ ಈಗಾಗಲೇ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಆದರೆ, ಜನ ಇನ್ನೂ ಬುದ್ದಿ ಕಲಿತಂತೆ ಕಾಣುತ್ತಿಲ್ಲ. ಹೈ ಅಲರ್ಟ್ ಘೋಷಿಸಿದ್ದರೂ ಜನ ನಿಯಮ ಮೀರಿ ನಡೆದುಕೊಳ್ಳುತ್ತಿದ್ದಾರೆ.
ದೇಶದೆಲ್ಲೆಡೆ ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಬಂದ್ಗೆ ಆದೇಶಿಸಲಾಗಿದೆ. ಆದರೆ, ಇನ್ನೂ ಹಲವೆಡೆ ಅದನ್ನು ಪಾಲಿಸುವಲ್ಲಿ ಜನರು ವಿಫಲರಾಗುತ್ತಿದ್ದಾರೆ.
ಶಿರಾ ಪಟ್ಟಣದಲ್ಲಿ ಅಲರ್ಟ್ ಘೋಷಿಸಲಾಗಿದ್ದರೂ ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಜನರು ಪಡಿತರ ಅಕ್ಕಿ ಪಡೆಯುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮುಗಿಬೀಳುತ್ತಿದ್ದ ದೃಶ್ಯ ಕಂಡುಬಂದಿದೆ.
ಪೊಲೀಸರು ಮತ್ತು ಅಧಿಕಾರಿಗಳು ಎಷ್ಟೇ ಹೇಳಿದರೂ ಕೂಡ ಜನ ಕ್ಯಾರೆ ಅನ್ನುತ್ತಿಲ್ಲ.