ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿ ಅವರ ಮೂರನೇ ತಿಂಗಳ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ಸಿದ್ಧಗಂಗಾ ಮಠದಲ್ಲಿನ ಶಿವಕುಮಾರ ಸ್ವಾಮೀಜಿ ಗದ್ದುಗೆ ಬಳಿ ನಡೆಸಲಾಯಿತು.
ಬೆಳಗ್ಗೆಯಿಂದಲೂ ವಿಶೇಷ ಪೂಜೆ, ಪುಷ್ಪಾರ್ಚನೆ, ಎಳ ನೀರಿನ ಅಭಿಷೇಕ ನೆರವೇರಿಸಲಾಯಿತು. ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಶ್ರೀ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಗದ್ದುಗೆ ಬಳಿ ಬಂದು ಭಕ್ತರು ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು.