ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎಲ್ಲ ಪಕ್ಷಗಳಿಂದಲೂ ಬಿರುಸಿನ ಪ್ರಚಾರ ಸಾಗಿದ್ದು, ಚಿಕ್ಕಮಗಳೂರು -ಉಡುಪಿ ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.
ಶೋಭಾ ಕರಂದ್ಲಾಜೆ ಶಿರಾ ತಾಲೂಕಿನ ದ್ವಾರನಕುಂಟೆ ಗ್ರಾಮದಲ್ಲಿ ಮಹಿಳೆಯರ ಸಭೆ ನಡೆಸಿದರು. ಈ ವೇಳೆ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮನವಿ ಮಾಡಿದ ಅವರು, ರಾಜ್ಯದಲ್ಲಿ ಮಹಿಳೆಯರು ಹಾಗೂ ವಯೋವೃದ್ಧರನ್ನು ಗಮನದಲ್ಲಿಟ್ಟುಕೊಂಡು ಯಡಿಯೂರಪ್ಪ ಸರ್ಕಾರದಲ್ಲಿ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು, ಬೇರೆ ಯಾವ ಸರ್ಕಾರಗಳೂ ಇಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಹೀಗಾಗಿ, ಯಡಿಯೂರಪ್ಪನವರ ಕೈ ಬಲಪಡಿಸಲು ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮತ ನೀಡಿ ಎಂದು ವಿನಂತಿಸಿಕೊಂಡರು.